ರಾಮನಗರ: ಇಲ್ಲಿನ ನಗರಸಭೆಯ 4ನೇ ವಾರ್ಡ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ತೇಜಸ್ವಿನಿ ಸುರೇಶ್ ಭರ್ಜರಿ ಗೆಲುವು ಸಾಧಿಸಿದ್ದು, ಜೆಡಿಎಸ್ ಅಭ್ಯರ್ಥಿ ಸೋಲುಂಡಿದ್ದಾರೆ.
4ನೇ ವಾರ್ಡ್ನಲ್ಲಿ ಕಾಂಗ್ರೆಸ್ ಸದಸ್ಯೆಯಾಗಿದ್ದ ಲೀಲಾ ಗೋವಿಂದರಾಜು ಅವರು ಕೊರೊನಾದಿಂದ ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ವಾರ್ಡ್ನಲ್ಲಿ ಉಪಚುನಾವಣೆ ನಡೆಸಲಾಗಿತ್ತು. ಕಾಂಗ್ರೆಸ್‌ನ ತೇಜಸ್ವಿನಿ ಸುರೇಶ್ ಅವರು ಪ್ರತಿಸ್ಪರ್ಧಿ, ಜೆಡಿಎಸ್ ಅಭ್ಯರ್ಥಿ ಅನುಸೂಯ ವಿರುದ್ಧ ಅತ್ಯಧಿಕ ಅಂದರೇ 899 ಮತಗಳ ಅಂತರದಿಂದ ಭರ್ಜರಿ ಜಯ ದಾಖಲಿಸಿದ್ದಾರೆ.
ಅನುಸೂಯ ಅವರು ಕೇವಲ 191 ಮತಗಳು ಪಡೆದುಕೊಂಡಿದ್ದಾರೆ. ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಪ್ರಬಲವಾಗಿ ಗುರುತಿಸಿಕೊಂಡಿದ್ದು, ತಮ್ಮ ಪಕ್ಷದ ಅಭ್ಯರ್ಥಿಯ ಸೋಲಿನಿಂದ ಶಾಸಕಿ ಅನಿತಾ ಕುಮಾರಸ್ವಾಮಿಗೆ ಮುಖಭಂಗ ಎದುರಾಗಿದೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿ ಬಂದಿದೆ.
PublicNext
06/09/2021 11:35 am