ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿಎಂ ಬೊಮ್ಮಾಯಿ ದೆಹಲಿ ಭೇಟಿ- ಕೇಂದ್ರ ಸಚಿವರೊಂದಿಗೆ ಮಹತ್ವದ ಚರ್ಚೆ ಸಾಧ್ಯತೆ

ನವದೆಹಲಿ: ಮುಖ್ಯಮಂತ್ರಿ ಪದವಿ ಸ್ವೀಕರಿಸಿದ ಬಳಿಕ ಬಸವರಾಜ ಬೊಮ್ಮಾಯಿ ಇಂದು ಎರಡನೇ ಬಾರಿಗೆ ದೆಹಲಿಗೆ ಭೇಟಿ ನೀಡಲಿದ್ದಾರೆ. ನಗರ ಸಭೆ, ಪುರ ಸಭೆ, ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಉತ್ತಮ ಫಲಿತಾಂಶ ಬಂದಿರುವುದು ಅವರಿಗೆ ದೆಹಲಿ ಮಟ್ಟದಲ್ಲಿ ವರ್ಚಸ್ಸು ಹೆಚ್ಚಿಸಿರುವ ಸಾಧ್ಯತೆಯಿದೆ ಎನ್ನಲಾಗಿದೆ.

ಸಿಎಂ ಬೊಮ್ಮಾಯಿ ಅವರು ಎರಡು ದಿನಗಳಲ್ಲಿ ಒಟ್ಟು 3 ಕಾರ್ಯಕ್ರಮ ಇಟ್ಟುಕೊಂಡು ದೆಹಲಿಗೆ ಭೇಟಿ ನೀಡುತ್ತಿದ್ದಾರೆ. ಕೇಂದ್ರ ಸಚಿವರನ್ನು ಸಿಎಂ ಬೊಮ್ಮಾಯಿ ಭೇಟಿ ಮಾಡಲಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪುತ್ರಿ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗಿ, ಹೈಕಮಾಂಡ್ ನಾಯಕರ ಭೇಟಿ, ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಶೇಖಾವತ್ ಭೇಟಿ, ಮೇಕೆದಾಟು ಡಿಪಿಆರ್ ಬಗ್ಗೆ ಸಮಾಲೋಚನೆ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ ಹಾಗೂ ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆ ಚರ್ಚೆ ಕಾರ್ಯಕ್ರಮಗಳನ್ನು ಸಿಎಂ ಬೊಮ್ಮಾಯಿ ಹೊಂದಿದ್ದಾರೆ ಎನ್ನಲಾಗಿದೆ.

ಸಿಎಂ ದೆಹಲಿ ಭೇಟಿ ಬೆನ್ನಲ್ಲೇ ಸಂಪುಟ ವಿಸ್ತರಣೆ ಚರ್ಚೆಯಾಗುವ ಸಾಧ್ಯತೆಗಳಿವೆ. ಈ ಮೂಲಕ ಸಿಎಂ ಅವರು ಬಾಕಿ 4 ಸ್ಥಾನ ಭರ್ತಿ ಮಾಡ್ತಾರಾ ಎಂಬ ಪ್ರಶ್ನೆ ಹುಟ್ಟಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿ ಹಲವು ನಾಯಕರ ಭೇಟಿಯಾಗಲಿದ್ದು, ಈ ವೇಳೆ ಯಾವೆಲ್ಲಾ ವಿಷಯದ ಬಗ್ಗೆ ಚರ್ಚೆ ನಡೀಬೋದು ಎಂಬ ಕುತೂಹಲ ಕಮಲ ನಾಯಕರಲ್ಲಿ ಹುಟ್ಟಿಕೊಂಡಿದೆ.

Edited By : Vijay Kumar
PublicNext

PublicNext

07/09/2021 10:05 am

Cinque Terre

38.48 K

Cinque Terre

3

ಸಂಬಂಧಿತ ಸುದ್ದಿ