This is a modal window.
ಮುಲ್ಕಿ: ರಾಜ್ಯಕ್ಕೆ ಹಾಗೂ ರಾಷ್ಟ್ರಕ್ಕೆ ಈಗಿನ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷ ಅನಿವಾರ್ಯವಾಗಿದ್ದು ಕಳೆದ 70 ವರ್ಷಗಳ ಸಾಧನೆಯನ್ನು ಜನರಿಗೆ ತಿಳಿಸಬೇಕಾಗಿದೆ ಎಂದು ಕರ್ನಾಟಕದ ಮಾಜಿ ಉಪಮುಖ್ಯಮಂತ್ರಿ ಪರಮೇಶ್ವರ್ ಹೇಳಿದರು.
ಅವರು ಹಳೆಯಂಗಡಿಯ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಜೊತೆ ಮಾತನಾಡಿ ಪಕ್ಷದಲ್ಲಿ ಎಲ್ಲೋ ಒಂದು ಕಡೆ ಸಂಘಟನೆಯ ಕೊರತೆ ಎದ್ದು ಕಾಣುತ್ತಿದ್ದು ಪ್ರತಿಯೊಬ್ಬ ಕಾಂಗ್ರೆಸ್ಸಿನ ಸದಸ್ಯರು ಸಂಘಟನೆ ಮೂಲಕ ಪಕ್ಷವನ್ನು ಬಲಪಡಿಸದಿದ್ದರೆ ಮುಂದಿನ ದಿನಗಳಲ್ಲಿ ಕಠಿಣವಾಗಬಹುದು.
ಈಗಲೂ ಕಾಂಗ್ರೆಸ್ ಮತಪತ್ರದ ಮೂಲಕ ಚುನಾವಣೆ ನಡೆದರೆ ಜಯ ಗಳಿಸುತ್ತದೆ ಎಂಬ ವಿಶ್ವಾಸ ಇದೆ. ಆದರೆ ಆಡಳಿತಪಕ್ಷ ಮತಯಂತ್ರಗಳನ್ನು ದುರುಪಯೋಗಪಡಿಸಿಕೊಂಡು ಚುನಾವಣೆಯಲ್ಲಿ ಜಯ ಗಳಿಸುತ್ತಿದೆ.
ಕೇಂದ್ರ ಸರಕಾರ ಸಂವಿಧಾನ ತಿರುಚುವ ಯತ್ನ ಮಾಡುತ್ತಿದ್ದು ಉದ್ಯಮಿಗಳಿಗೆ ದೇಶವನ್ನೇ ಮಾರುವ ಹುನ್ನಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದ ಅವರು ತೈಲ ಬೆಲೆ ಏರಿಕೆಯಿಂದ ಸಂಗ್ರಹವಾದ ತೆರಿಗೆ ಹಣ ಎಲ್ಲಿ ಹೋಗುತ್ತದೆ? ಎಂದು ಪ್ರಶ್ನಿಸಿದರು.
ಕಾರ್ಯಕರ್ತರು ಒಗ್ಗಟ್ಟಾಗಿ ಪಕ್ಷ ಸಂಘಟನೆ ಮೂಲಕ ಮುಂದಿನ ಚುನಾವಣೆಗಳಿಗೆ ಸಿದ್ದರಾಗಿ ಎಂದರು ಈ ಸಂದರ್ಭ ಮುಲ್ಕಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪರಮೇಶ್ವರ್ ರವರನ್ನು ಗೌರವಿಸಲಾಯಿತು.
ಮಾಜಿ ಸಚಿವ ಅಭಯಚಂದ್ರ ಜೈನ್, ಕಾಂಗ್ರೆಸ್ ನಾಯಕ ಮಿಥುನ್ ರೈ ,ಡಿಸಿಸಿ ಅಧ್ಯಕ್ಷ ಮಂಜುನಾಥ ಭಂಡಾರಿ,ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಕೆಪಿಸಿಸಿ ಕೋಆರ್ಡಿನೇಟರ್ ವಸಂತ್ ಬೆರ್ನಾಡ್, ಕೆಪಿಸಿಸಿ ಹಿಂದುಳಿದ ವರ್ಗದ ರಾಜ್ಯ ಕಾರ್ಯದರ್ಶಿ ಪ್ರವೀಣ್ ಬೊಳ್ಳೂರು,ಮ.ನಾ.ಪ. ಸದಸ್ಯರಾದ ಅನಿಲ್ ಪೂಜಾರಿ ಪ್ರವೀಣ್ ಆಳ್ವ, ಮಾಜೀ ಸದಸ್ಯೆ ಪ್ರತಿಭಾ ಕುಳಾಯಿ, ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರ,ಪಕ್ಷದ ಕಾರ್ಯಕರ್ತರು ಸದಸ್ಯರು ಉಪಸ್ಥಿತರಿದ್ದರು.
PublicNext
07/09/2021 02:03 pm