ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂತ್ರಿ ಸ್ಥಾನ ಸಿಗುವ ಭರವಸೆ ಈಗಲೂ ಇದೆ: ಶ್ರೀಮಂತ್ ಪಾಟೀಲ್

ಚಿಕ್ಕೋಡಿ(ಬೆಳಗಾವಿ ಜಿಲ್ಲೆ): ಸಚಿವ ಸ್ಥಾನ ಸಿಗುತ್ತದೆಂಬ ಭರವಸೆ ಈಗಲೂ ಇದೆ. ಈ ಬಗ್ಗೆ ನನಗೆ ಹೈಕಮಾಂಡ್ ಕೂಡ ಭರವಸೆ ನೀಡಿದೆ ಎಂದು ಶಾಸಕ ಶ್ರೀಮಂತ್ ಪಾಟೀಲ್ ಹೇಳಿದ್ದಾರೆ.

ಕಾಗವಾಡ ಮತಕ್ಷೇತ್ರದ ಕೆಂಪವಾಡ ಗ್ರಾಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಉತ್ತರ ಕರ್ನಾಟಕಕ್ಕೆ ಸಿಎಂ ಸ್ಥಾನ ಸಿಕ್ಕಿದ್ದು ಸಂತೋಷ ಉಂಟುಮಾಡಿದೆ. ಈ ಭಾಗದಲ್ಲಿ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಬೇಸಿಗೆ ಸಂದರ್ಭದಲ್ಲಿ ಕೃಷ್ಣಾ ನದಿ ಬತ್ತಿ ಹೋಗುತ್ತದೆ. ಆ ಸಮಯದಲ್ಲಿ ಮಹಾರಾಷ್ಟ್ರ ರಾಜ್ಯದಿಂದ ನಮಗೆ ನೀರು ಹರಿಸುವ ಯೋಜನೆ ಒಪ್ಪಂದ ಸದ್ಯದಲ್ಲೇ ಆಗುವುದರಿಂದ ನಮ್ಮ ಭಾಗಕ್ಕೆ ಹೆಚ್ಚಿನ ಅನುಕೂಲ ಆಗುತ್ತದೆ ಎಂದರು.

ಯಡಿಯೂರಪ್ಪನವರು ಸಿಎಂ ಆಗಿದ್ದಾಗಿ ಅವರ ಸಂಪುಟದಲ್ಲಿ ಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಈಗ ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಸಿಗಲಿಲ್ಲ. ಆದ್ರೆ ಮುಂದೆ ಸಿಗುವ ವಿಶ್ವಾಸ ನನಗಿದೆ ಎಂದಿದ್ದಾರೆ.

Edited By : Nagaraj Tulugeri
PublicNext

PublicNext

07/09/2021 03:31 pm

Cinque Terre

33.88 K

Cinque Terre

4

ಸಂಬಂಧಿತ ಸುದ್ದಿ