ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೇಂದ್ರ ಸಚಿವ ಜೋಶಿ ಪುತ್ರಿಯ ಆರತಕ್ಷತೆಯಲ್ಲಿ ಪಾಲ್ಗೊಂಡು ಶುಭ ಕೋರಿದ ಪ್ರಧಾನಿ

ನವದೆಹಲಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪುತ್ರಿ ಅರ್ಪಿತಾ ಅವರ ಮದುವೆ ಆರತಕ್ಷತೆಯನ್ನು ಇಂದು ನವದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಆರತಕ್ಷತೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ನೂತನ ಜೋಡಿಗೆ ಶುಭ ಕೋರಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ್ದಾರೆ.

ಸಂಸದ ಜೋಶಿ ಪ್ರಧಾನಿಗೆ ಧನ್ಯವಾದ ತಿಳಿಸಿದ್ದು ಹೀಗೆ..

"ಇಂದು ನವದೆಹಲಿಯಲ್ಲಿ ಜರುಗಿದ ನನ್ನ ಮಗಳು ಅರ್ಪಿತಾ ಮತ್ತು ಹೃಷಿಕೇಶ ಇವರ ಮದುವೆಯ ಆರತಕ್ಷತೆಗೆ ಆಗಮಿಸಿ ವಧು ವರರನ್ನು ಆಶೀರ್ವದಿಸಿದ ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ಶ್ರೀ ನರೇಂದ್ರ ಮೋದಿ ಅವರಿಗೆ ಜೋಶಿ ಕುಟುಂಬದ ಪರವಾಗಿ ತುಂಬು ಹೃದಯದ ಧನ್ಯವಾದಗಳು."

ಇದರೊಂದಿಗೆ ಜೋಶಿ ಪುತ್ರಿಯ ವಿವಾಹ ಆರತಕ್ಷತೆಯಲ್ಲಿ ಇನ್ನೂ ಅನೇಕ ಗಣ್ಯರು ಪಾಲ್ಗೊಂಡು ನೂತನ ಜೋಡಿಗೆ ಶುಭ ಕೋರಿದ್ದಾರೆ.

Edited By : Nagaraj Tulugeri
PublicNext

PublicNext

07/09/2021 11:02 pm

Cinque Terre

80.36 K

Cinque Terre

21

ಸಂಬಂಧಿತ ಸುದ್ದಿ