ಉಡುಪಿ: ಲಿಂಗಾಯಿತ ಸಮುದಾಯದ ಪಂಗಡಗಳಿಗೆ - ಮೀಸಲಾತಿ ನೀಡದಿದ್ದರೆ ಹೋರಾಟ ಮಾಡುವುದು ಅನಿವಾರ್ಯ.ಈ ಹಿಂದೆ ಸರ್ಕಾರ ಸೆ. 15ರವರೆಗೆ ಕಾಲಾವಕಾಶ ಕೇಳಿತ್ತು. ಈಗ ಗಡುವು ಮುಗಿಯುತ್ತಾ ಬಂದಿದೆ. ಅ. 1ರೊಳಗೆ ಮೀಸಲಾತಿ ನೀಡದಿದ್ದರೆ ಬೆಂಗಳೂರಿನ ಪ್ರೀಡಂ ಪಾರ್ಕ್ ನಲ್ಲಿ ಸತ್ಯಾಗ್ರಹ ನಡೆಸಲಾಗುವುದು ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಮಹಾ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಉಡುಪಿ ಭೇಟಿಯಲ್ಲಿರುವ ಸ್ವಾಮೀಜಿ ಇವತ್ತು ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ರಾಜ್ಯದಲ್ಲಿ ಮೂರು ಕೋಟಿಯಷ್ಟು ಲಿಂಗಾಯಿತ ಸಮುದಾಯದ ಜನರಿದ್ದಾರೆ.ಆದರೂ ಸಾಮಾಜಿಕ ಸೌಲಭ್ಯದಳಿಂದ ವಂಚಿತರಾಗಿದ್ದಾರೆ. ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು ಎಂಬುದು ನಮ್ಮ ಬಹುಕಾಲದ ಬೇಡಿಕೆಯಾಗಿದೆ. ಲಿಂಗಾಯತ ಸಮುದಾಯದಲ್ಲಿ 110 ಪಂಗಡಗಳಿದ್ದು ಇದರಲ್ಲಿ 34 ಪಂಗಡಗಳಿಗೆ 2 ಎ ಮೀಸಲಾತಿ ಸೌಲಭ್ಯ ನೀಡಲಾಗಿದೆ. 12 ಪಂಗಡಗಳು 3ಬಿ ಮೀಸಲಾತಿ ಪಡೆದಿವೆ. ಉಳಿದ ಪಂಗಡಗಳು ಅವಕಾಶ ವಂಚಿತವಾಗಿದ್ದು, ಎಲ್ಲರಿಗೂ 2ಎ ಮೀಸಲಾತಿ ಸೌಲಭ್ಯ ದೊರೆಯಬೇಕು. ಈ ಬಗ್ಗೆ ಸರಕಾರವನ್ನು ಆಗ್ರಹಿಸಲಾಗಿದ್ದು, ಸರಕಾರ ನೀಡಿರುವ ಗಡುವು ಮುಗಿಯುತ್ತಾ ಬಂದಿದೆ ಎಂದು ಹೇಳಿದರು.
ಸ್ವಾಮೀಜಿಗಳ ಜೊತೆ ಡಾ. ಯುಸಿ ನಿರಂಜನ್, ಸಿದ್ದರಾಮಣ್ಣ, ಗಂಗಾಧರ, ಸುರೇಶ್, ಮಲ್ಲಿಕಾರ್ಜುನಪ್ಪ, ಶಂಭುಲಿಂಗ ಶೆಟ್ಟರ್ ಮೊದಲಾದವರು ಉಪಸ್ಥಿತರಿದ್ದರು
PublicNext
08/09/2021 02:04 pm