ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಸಿಎಂ ಬೊಮ್ಮಾಯಿ ದೆಹಲಿಗೆ ಹೋಗಲು ಹಲವಾರು ಕಾರಣಗಳಿವೆ

ಧಾರವಾಡ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ಹೋಗಲು ಹಲವಾರು ಕಾರಣಗಳಿವೆ. ಅವರು ದೆಹಲಿಗೆ ಹೋಗುತ್ತಿರುವುದು ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲು ಹೊರತು ಬೇರೆ ಯಾವುದಕ್ಕೂ ಅಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು.

ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹ ಸಚಿವ ಅಮಿತ್ ಷಾ ಅವರೇ ಬೊಮ್ಮಾಯಿ ಅವರನ್ನು ಹಾಡಿ ಹೊಗಳಿದ್ದಾರೆ. ರಾಜ್ಯದ ಹಲವಾರು ಸಮಸ್ಯೆಗಳಿವೆ. ಅವುಗಳ ಬಗ್ಗೆ ಚರ್ಚಿಸಲು ಹಾಗೂ ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಬೊಮ್ಮಾಯಿ ಅವರು ದೆಹಲಿಗೆ ಹೋಗಿ ನಾಯಕರನ್ನು ಭೇಟಿಯಾಗುತ್ತಿದ್ದಾರೆ ಎಂದರು.

ಇನ್ನು ಹೆಣ್ಣು ಮಕ್ಕಳ ಸುರಕ್ಷತೆ ಬಗ್ಗೆ ಮಾತನಾಡಿದ ಅರಗ, ಯಾರು ಎಲ್ಲಿಗೆ ಹೋಗಬೇಕು? ಎಲ್ಲಿಗೆ ಹೋಗಬಾರದು ಎಂದು ನಾವು ನಿರ್ಬಂಧ ಹೇರಲಿಕ್ಕಾಗದು. ಅವರೇ ಎಚ್ಚರಿಕೆ ವಹಿಸಿಕೊಳ್ಳಬೇಕು. ಎಲ್ಲೆಲ್ಲಿ ಸೂಕ್ಷ್ಮ ಪ್ರದೇಶಗಳಿವೆಯೋ ಅಲ್ಲಲ್ಲಿ ಪೊಲೀಸ್ ಗಸ್ತು ಹೆಚ್ಚಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ರಾಜ್ಯದಲ್ಲಿ ಕಳೆದ 4 ವರ್ಷಗಳ ಹಿಂದೆ 33 ಸಾವಿರ ಪೊಲೀಸ್ ಸಿಬ್ಬಂದಿ ಕೊರತೆ ಇತ್ತು. ಈಗ 16 ಸಾವಿರ ಸಿಬ್ಬಂದಿ ಕೊರತೆ ಇದೆ. ಅದರಲ್ಲಿ 4 ಸಾವಿರ ಪೊಲೀಸ್ ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳುತ್ತೇವೆ ಎಂದರು.

ನಮ್ಮ ಸರ್ಕಾರ ಬಂದ ಮೇಲೆ ಪೊಲೀಸ್ ಇಲಾಖೆ ಹಾಗೂ ಅಗ್ನಿಶಾಮಕ ಇಲಾಖೆಗಳ ಬಗ್ಗೆ ವಿಶೇಷವಾದ ಗಮನ ಕೊಟ್ಟಿದ್ದೇವೆ. ಸಾಕಷ್ಟು ಅನುದಾನ ಕೂಡ ಬಿಡುಗಡೆ ಮಾಡಿ ಪೊಲೀಸ್ ವಸತಿ ಗೃಹಗಳನ್ನು ಮೇಲ್ದರ್ಜೆಗೆ ಏರಿಸಿದ್ದೇವೆ. ಶೇ.49 ರಷ್ಟು ಪೊಲೀಸ್ ಸಿಬ್ಬಂದಿ ಈಗಾಗಲೇ ಡಬಲ್ ಬೆಡ್‌ ರೂಮ್ ಇರುವ ಮನೆಗಳಲ್ಲಿ ವಾಸಿಸುತ್ತಿದ್ದಾರೆ. ಹಲವಾರು ಪೊಲೀಸ್ ಠಾಣೆಗಳನ್ನು ಅಪ್‌ಗ್ರೇಡ್ ಮಾಡಿದ್ದೇವೆ. ಠಾಣೆಗಳಿಗೇ ಹೋಗಿ ದೂರು ಕೊಡುವ ಬದಲು 112 ಎಂಬ ಹೆಲ್ಪಲೈನ್‌ ಪ್ರಾರಂಭಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿದ್ದೇವೆ. 112 ಕ್ಕೆ ಜನ ಕರೆ ಮಾಡಿ ತಮ್ಮ ದೂರು ದಾಖಲಿಸಬಹುದಾಗಿದೆ ಎಂದರು.

Edited By : Manjunath H D
PublicNext

PublicNext

08/09/2021 07:42 pm

Cinque Terre

115 K

Cinque Terre

3

ಸಂಬಂಧಿತ ಸುದ್ದಿ