ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭಾರತದಲ್ಲಿ ಮುಸ್ಲಿಮರು ಬಹುಸಂಖ್ಯಾತರಾಗಲು ಸಾಧ್ಯವಿಲ್ಲ: ದಿಗ್ವಿಜಯ್ ಸಿಂಗ್

ಇಂದೋರ್ (ಮಧ್ಯ ಪ್ರದೇಶ): ಸಂಘ ಪರಿವಾರದ ಸ್ವಯಂ ಸೇವಕರು ಕೋಮು ದ್ವೇಷ ಹರಡುವ ಕೆಲಸ ಮಾಡುತ್ತಿದ್ದಾರೆ. ಇನ್ನೊಂದೆಡೆ ಮೋಹನ್ ಭಾಗವತ್ ಅವರು ಭಾರತದ ಹಿಂದೂಗಳು ಹಾಗೂ ಮುಸ್ಲಿಮರ ಡಿಎನ್‌ಎ ಒಂದೇ ಆಗಿದೆ ಎನ್ನುತ್ತಿದ್ದಾರೆ. ಈ ಬಗ್ಗೆ ಅವರು ನನ್ನೊಂದಿಗೆ ಚರ್ಚೆಗೆ ಬರಲಿ ಎಂದು ಅವರಿಗೆ ಬಹಿರಂಗ ಸವಾಲು ಹಾಕುತ್ತೇನೆ ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

ಕಾಂಗ್ರೆಸ್ ಮತ್ತು ಎಡಪಕ್ಷಗಳು ಜಂಟಿಯಾಗಿ ಆಯೋಜಿಸಿದ್ದ ‘ಕೋಮು ಸಾಮರಸ್ಯ ಸಮಾವೇಶ’ದಲ್ಲಿ ಮಾತನಾಡಿದ ಅವರು, ರಾವಣ ಮತ್ತು ಆತನ ಹತ್ತು ತಲೆಗಳನ್ನು ಹೋಲಿಸಿ ಬಿಜೆಪಿ ಹಾಗೂ ಆರ್‌ಎಸ್‌ಎಸ್ ವಿರುದ್ಧ ಹರಿಹಾಯ್ದಿದ್ದಾರೆ. ದೇಶದಲ್ಲಿ ಮುಸ್ಲಿಮರ ಫಲವತ್ತತೆ ಕುಸಿದಿದೆ. ಹೀಗಾಗಿ ಅವರು ಭಾರತದಲ್ಲಿ ಹಿಂದೂಗಳನ್ನು ಮೀರಿಸಿ ಬಹುಸಂಖ್ಯಾತರಾಗಲು ಸಾಧ್ಯವಿಲ್ಲ ಎಂದು ಇದೇ ವೇಳೆ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

Edited By : Nagaraj Tulugeri
PublicNext

PublicNext

08/09/2021 10:30 pm

Cinque Terre

78.65 K

Cinque Terre

14

ಸಂಬಂಧಿತ ಸುದ್ದಿ