ಹಾಸನ: ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಬಿಜೆಪಿಗೆ ಜೆಡಿಎಸ್ ಬೆಂಬಲ ನೀಡಲಿದೆಯೇ ಎಂಬ ಪ್ರಶ್ನೆಗೆ ಶಾಸಕ ಎಚ್.ಡಿ.ರೇವಣ್ಣ ಮಾರ್ಮಿಕವಾಗಿ ಉತ್ತರ ನೀಡಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಜೆಡಿಎಸ್ ಮುಳುಗುವ ಹಡಗು ಎಂದಿದ್ದಾರೆ. ಹೀಗಿರುವಾಗ ನಮ್ಮ ಜತೆ ಹೊಂದಾಣಿಕೆ ಮಾಡಿಕೊಂಡರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುರ್ಚಿಗೆ ಧಕ್ಕೆ ಬರಲಿದೆ. ನೀವು ಮುಳುಗುವ ಹಡಗಿನ ಜೊತೆ ಯಾಕೆ ಬರುತ್ತೀರಾ? ಮುಳುಗುವ ಹಡಗಿನ ಜೊತೆ ಸೇರಿ ನಿಮ್ಮ ಸ್ಥಾನಕ್ಕೆ ಕುತ್ತು ತಂದುಕೊಳ್ಳಬೇಡಿ ಎಂದು ಬಿಜೆಪಿಗೆ ಕುಟುಕಿದ್ದಾರೆ.
"ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರು ಕಾರ್ಯಕರ್ತರ ಜತೆ ಚರ್ಚಿಸಿ ಯಾವ ಪಕ್ಷಕ್ಕೆ ಬೆಂಬಲ ನೀಡಬೇಕು ಎಂಬುದನ್ನು ತೀರ್ಮಾನ ಕೈಗೊಳ್ಳುತ್ತಾರೆ. ಅರುಣ್ ಸಿಂಗ್ ಹೇಳಿದ್ದನ್ನು ಮುಖ್ಯಮಂತ್ರಿ ಬೊಮ್ಮಾಯಿ ಪಾಲಿಸಲಿ. ಹಡಗು ಮುಳುಗಿದರೆ ನಮ್ಮ ಬಳಿ ಸಬ್ ಮೆರಿನ್ ಇದೆ. ಪಕ್ಷ ಉಳಿಸಿಕೊಳ್ಳುವುದು ಗೊತ್ತು" ಎಂದು ಟಾಂಗ್ ನೀಡಿದ್ದಾರೆ.
PublicNext
09/09/2021 02:01 pm