ಕೋಲ್ಕತ್ತ: ಪಶ್ಚಿಮ ಬಂಗಾಳದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಸೆ.30 ರಂದು ಉಪಚುನಾವಣೆ ನಿಗದಿಯಾಗಿದೆ. ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಈ ಚುನಾವಣೆಯಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಎದುರಾಗಿದೆ. ದೀದೀ ಈಗಾಗಲೇ ಭಬಾನಿಪುರ ಕ್ಷೇತ್ರದಲ್ಲಿ ಬಿರುಸಿನ ಮತಯಾಚನೆಯಲ್ಲಿ ತೊಡಗಿದ್ದು, ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿಯಿಂದ ಯುವ ನಾಯಕಿ ಪ್ರಿಯಾಂಕ ತ್ರಿಬವಾಲ್ ಕಣಕ್ಕಿಳಿಯುವುದು ಬಹುತೇಕ ನಿಶ್ಚಿತ ಆಗಿದೆ ಎನ್ನಲಾಗಿದೆ.
2014 ರಲ್ಲಿ ಬಿಜೆಪಿ ಸೇರಿದ್ದ ಪ್ರಿಯಾಂಕ ತ್ರಿಬವಾಲ್ ಬಿಜೆಪಿ ಯುವ ಮೋರ್ಚಾದ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದರು. ಬಳಿಕ 2015ರಲ್ಲಿ ಕೋಲ್ಕತಾ ನಗರ ಪಾಲಿಕೆಗೆ ಸ್ಪರ್ಧೆ ಮಾಡಿದ್ದ ಅವರು ಟಿಎಂಸಿಯ ಸ್ವಪನ್ ಸಮ್ಮದರ್ ವಿರುದ್ಧ ಸೋತಿದ್ದರು. 2021ರ ವಿಧಾನಸಭಾ ಚುನಾವಣೆಯಲ್ಲಿ ಎಂತಲ್ಲಿ ಕ್ಷೇತ್ರದಿಂದ ಸ್ಪರ್ಧಿಸಿ ಟಿಎಂಸಿಯ ಕಮಲ್ ಸಾಹಾ ವಿರುದ್ಧ ಪರಾಭವಗೊಂಡಿದ್ದರು. ಮಾಜಿ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಅವರಿಗೆ ಕಾನೂನು ಸಲಹೆಗಾರ್ತಿಯಾಗಿದ್ದ ಪ್ರಿಯಾಂಕ ಭವಾನಿಪುರ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಕಣಕ್ಕಿಳಿಯುವುದು ನಿಶ್ಚಿತ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
PublicNext
09/09/2021 03:18 pm