ಬೆಂಗಳೂರು: ಅಧಿಕಾರಕ್ಕಾಗಿ ಕಾಂಗ್ರೆಸ್ ಪಕ್ಷ ಏನು ಬೇಕಾದರೂ ಮಾಡುತ್ತದೆ. ಬಿಜೆಪಿಯು ದ್ವೇಷದ ಸಿದ್ಧಾಂತ ಹೊಂದಿದೆ. ಹೀಗಾಗಿ ಸಮಾನತೆ ತರಲು ಈ ಎರಡೂ ಪಕ್ಷಗಳನ್ನು ನಾವು ತೊಡೆದು ಹಾಕಬೇಕಿದೆ ಎಂದು ನಟ ಚೇತನ್ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ದ್ವೇಷ ಸಿದ್ಧಾಂತ ಹೊಂದಿದ ಬಿಜೆಪಿಯನ್ನು ತೊಡೆದು ಹಾಕಿದರೆ, ಕಾಂಗ್ರೆಸ್ ಅದರಿಂದ ಲಾಭ ಪಡೆದು ಇನ್ನಷ್ಟು ಬಲಗೊಳ್ಳುತ್ತದೆ. ಆದರೆ ಮೊದಲು ಕಾಂಗ್ರೆಸ್ಸನ್ನು ತೊಡೆದು ಹಾಕಿದರೆ, ಬಿಜೆಪಿಯ ಸಿದ್ದಾಂತವನ್ನು ನಮ್ಮ ಸಮಾನತೆಯ ಸಿದ್ಧಾಂತದಿಂದ ಧ್ವಂಸ ಮಾಡಬಹುದು ಎಂದು ಬರೆದಿದ್ದಾರೆ.
ಕಾಂಗ್ರೆಸ್ ಪಕ್ಷದ ಸದಸ್ಯರಾದ ಕೆಬಿ ಹೆಡ್ಗೆವಾರ್ ಅವರು 1925 ರಲ್ಲಿ ಆರ್‍ಎಸ್‍ಎಸ್ ಸ್ಥಾಪಿಸಿದರು. ಕಾಂಗ್ರೆಸ್ಸಿನ ಮತ್ತೊಬ್ಬ ಸದಸ್ಯರಾದ ಬಾಲ ಗಂಗಾಧರ ತಿಲಕ್ ಅವರು ಹೆಡ್ಗೆವಾರ್ ಅವರನ್ನು ಪ್ರಭಾವಿಸಿದ್ದರು. ಕಾಂಗ್ರೆಸ್ ಮತ್ತು ಆರ್‍ಎಸ್‍ಎಸ್ ಯಾವತ್ತಿನಿಂದಲೂ ಒಂದಕ್ಕೊಂದು ಬೆಸೆದುಕೊಂಡೇ ಇದೆ. ಬ್ರಾಹ್ಮಣ್ಯವನ್ನು ಉಳಿಸಿಕೊಳ್ಳುವುದರಿಂದ ಕಾಂಗ್ರೆಸ್ ಮತ್ತು ಆರ್‍ಎಸ್‍ಎಸ್ ಎರಡಕ್ಕೂ ಲಾಭವಾಗುತ್ತದೆ. ಸಮಾನತೆಗಾಗಿ ಕಾಂಗ್ರೆಸ್ ಮತ್ತು ಸಂಘ, ಎರಡನ್ನೂ ಸೋಲಿಸಬೇಕು ಎಂದು ನಟ ಚೇತನ್ ಹೇಳಿದ್ದಾರೆ.
PublicNext
09/09/2021 04:56 pm