ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಾಲ್ಕು ರಾಜ್ಯಗಳಿಗೆ ರಾಜ್ಯಪಾಲರ ನೇಮಕ

ನವದೆಹಲಿ: ತಮಿಳುನಾಡು, ಉತ್ತರಾಖಂಡ, ಪಂಜಾಬ್ ಸೇರಿದಂತೆ ನಾಲ್ಕು ರಾಜ್ಯಗಳಿಗೆ ರಾಜ್ಯಪಾಲರನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು, ನೇಮಕ ಮಾಡಿದ್ದಾರೆ. ನೂತನ ಆದೇಶ ಪ್ರಕಾರ ತಮಿಳುನಾಡು ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಪಂಜಾಬ್ ರಾಜ್ಯದ ರಾಜ್ಯಪಾಲರಾಗಿ ನೇಮಕವಾಗಿದ್ದಾರೆ. ಅಸ್ಸಾಂನ ರಾಜ್ಯಪಾಲ ಪ್ರೊ. ಜಗದೀಶ್ ಮುಖಿ ನಾಗಾಲ್ಯಾಂಡ್ನ ಉಸ್ತುವಾರಿ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ.

ಉಸ್ತುವಾರಿ ರಾಜ್ಯಪಾಲರ ನೇಮಕ

ಇನ್ನು ನಾಗಾಲ್ಯಾಂಡ್ ರಾಜ್ಯಕ್ಕೆ ಉಸ್ತುವಾರಿ ರಾಜ್ಯಪಾಲರ ನೇಮಕ ಮಾಡಲಾಗಿದ್ದು, ನಾಗಲ್ಯಾಂಡ್ ರಾಜ್ಯದ ಮಾಜಿ ರಾಜ್ಯಪಾಲ ಆರ್. ಎನ್. ರವಿ ತಮಿಳುನಾಡಿನ ನೂತನ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ. ತಮಿಳುನಾಡು ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಪಂಜಾಬ್ ರಾಜ್ಯದ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿದ್ದರು. ಗುರುವಾರ ಹೊರಡಿಸುವ ಆದೇಶ ಪ್ರಕಾರ ತಮಿಳುನಾಡು ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಪಂಜಾಬ್ ರಾಜ್ಯದ ರಾಜ್ಯಪಾಲರಾಗಿ ನೇಮಕವಾಗಿದ್ದಾರೆ. ಅಸ್ಸಾಂನ ರಾಜ್ಯಪಾಲ ಪ್ರೊ. ಜಗದೀಶ್ ಮುಖಿ ನಾಗಾಲ್ಯಾಂಡ್ ನ ಉಸ್ತುವಾರಿ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ. ಅಂತೆಯೇ ಲೆಫ್ಟಿನೆಂಟ್ ಗವರ್ನರ್ ಗುರ್ ಮೀತ್ ಸಿಂಗ್ ಉತ್ತರಾಖಂಡ್ ನೂತನ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ.

Edited By : Nirmala Aralikatti
PublicNext

PublicNext

10/09/2021 08:09 am

Cinque Terre

37.04 K

Cinque Terre

0