ಶ್ರೀನಗರ: ಕಣಿವೆ ಪ್ರಾಂತ್ಯ ಜಮ್ಮುವಿನ ರಿಯಾಸಿ ಜಿಲ್ಲೆಯ ತ್ರಿಕುಟಾ ಬೆಟ್ಟದಲ್ಲಿರುವ ಹೆಸರಾಂತ ಯಾತ್ರಾ ಸ್ಥಳ ವೈಷ್ಣೋದೇವಿ ಗುಹೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಾಲ್ನಡಿಗೆಯಲ್ಲಿ ಸಾಗಿದ್ದಾರೆ. ಜಮ್ಮುವಿನ ಕಟ್ರಾದಿಂದ ಇಲ್ಲಿಗೆ ಸುಮಾರು 14 ಕಿ.ಮೀ ದೂರವಿದಲ್ಲಿರುವ ವೈಷ್ಣೋದೇವಿ ಗುಹೆಗೆ ಕಾಲ್ನಡಿಗೆಯಲ್ಲಿ ಸಾಗಿದ ರಾಹುಲ್ ಗಾಂಧಿ ಶುಕ್ರವಾರ ಬೆಳಗ್ಗೆ ದೇವಿಯ ದರ್ಶನ ಪಡೆದಿದ್ದಾರೆ.
ಪ್ರಯಾಣದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿರುವ ರಾಹುಲ್, 'ನಾನು ವೈಷ್ಣೋಮಾತೆಗೆ ಪ್ರಾರ್ಥನೆ ಸಲ್ಲಿಸಲು ಬಂದಿದ್ದೇನೆ. ಈ ಸಮಯದಲ್ಲಿ ಯಾವುದೇ ರಾಜಕೀಯ ಹೇಳಿಕೆಗಳನ್ನು ನೀಡಲು ಬಯಸುವುದಿಲ್ಲ' ಎಂದು ತಿಳಿಸಿದ್ದಾರೆ. ಇನ್ನು ಈ ಯಾತ್ರೆ ವೇಳೆ ರಾಹುಲ್ ಗಾಂಧಿ ಅವರಿಗೆ ಇತರೆ ಯಾತ್ರಾರ್ಥಿಗಳು, ಸ್ಥಳೀಯ ಕಾಂಗ್ರೆಸ್ ಮುಖಂಡರು ಮತ್ತು ಭದ್ರತಾ ಸಿಬ್ಬಂದಿಗಳು ಸಾಥ್ ನೀಡಿದರು.
PublicNext
10/09/2021 11:23 am