ಹುಬ್ಬಳ್ಳಿ: ವಿಧಾನ ಮಂಡಲದ ಕಲಾಪಗಳಿಗೆ ಎಲ್ಲ ಸಚಿವರುಗಳು ಕಡ್ಡಾಯವಾಗಿ ಹಾಜರಾಗುವಂತೆ ಸೂಚನೆ ನೀಡಲು ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಪತ್ರ ಬರೆದಿದ್ದಾರೆ.
ಇದೇ ಸೆಪ್ಟೆಂಬರ್ 13ರಿಂದ ವಿಧಾನಮಂಡಲ ಕಲಾಪಗಳು ಆರಂಭವಾಗಲಿವೆ. ಈ ಕುರಿತು ಸಿಎಂಗೆ ಪತ್ರ ಬರೆದಿರುವ ಬಸವರಾಜ ಹೊರಟ್ಟಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿಧಾನ ಮಂಡಲ ಅಧಿವೇಶನ ಬಹು ಮುಖ್ಯವಾಗಿದೆ. ನಾಡಿನ ಜ್ವಲಂತ ಸಮಸ್ಯೆ, ಸಾರ್ವಜನಿಕ ಸಂಕಷ್ಟಗಳ ಕುರಿತು ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಲು ಅಧಿವೇಶನ ಸೂಕ್ತ ವೇದಿಕೆಯಾಗಿದೆ. ಹೀಗಾಗಿ ಶಾಸನ ಸಭೆಯ ಕಲಾಪಗಳು ನಡೆಯುವಾಗ ಸಚಿವರು ಸದನದಲ್ಲಿ ಹಾಜರಿರಬೇಕು ಎಂದು ಸೂಚನೆ ನೀಡುವಂತೆ ಮುಖ್ಯಮಂತ್ರಿಗೆ, ಸಭಾಪತಿ ಕೋರಿದ್ದಾರೆ.
PublicNext
10/09/2021 03:04 pm