ಲಖನೌ: ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂಬ ಆರೋಪದ ಮೇಲೆ ಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸ್ಥಳೀಯ ಚುನಾವಣೆಯೊಂದರ ರ್‍ಯಾಲಿಯಲ್ಲಿ ಭಾಷಣ ಮಾಡಿದ್ದ ಅವರು ಕೋವಿಡ್-19 ನಿಯಮ ಉಲ್ಲಂಘನೆ ಹಾಗೂ ಕೋಮು ಸಾಮರಸ್ಯಕ್ಕೆ ಧಕ್ಕೆ ತರುವ ಆರೋಪದಡಿ ಪ್ರಕರಣ ದಾಖಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಹಾಗೂ ಯುಪಿ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಅಸಭ್ಯ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಅಸಾದುದ್ದೀನ್ ಓವೈಸಿ ವಿರುದ್ಧ ಬಾರಾಬಂಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
10/09/2021 06:08 pm