ಮಂಗಳೂರು: ರಾಜ್ಯ ಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಅನಾರೋಗ್ಯದ ನಿಮಿತ್ತ ನಗರದ ಯೆನೆಪೊಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡೀಸ್ ಅವರನ್ನು ಇಂದು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿರುವ ಆಸ್ಕರ್ ಅವರನ್ನು ಭೇಟಿಯಾಗಬೇಕೆಂದು ಸಾಕಷ್ಟು ದಿನಗಳಿಂದ ಕಾಯುತ್ತಿದ್ದೆ. ಇಂದು ಮಂಗಳೂರಿಗೆ ಆಗಮಿಸಿ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದೇನೆ. ಅವರ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಾಣುತ್ತಿದೆ. ಕಣ್ಣು ತೆರೆಯುತ್ತಿದ್ದಾರೆ. ಆದಷ್ಟು ಶೀಘ್ರ ಅವರು ಚೇತರಿಕೆಯ ಕಾಣುತ್ತಾರೆಂಬ ಭರವಸೆ ಇದೆ. ಮತ್ತು ಅವರ ಆರೋಗ್ಯದ ಬಗ್ಗೆ ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.
PublicNext
11/09/2021 12:58 pm