ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಶ್ಮೀರ ಸಮಸ್ಯೆ ಗಾಂಧೀ ಕುಟುಂಬದ ಬಳುವಳಿ ಎಂದ ಬಿಜೆಪಿ

ನವದೆಹಲಿ: ಕಾಶ್ಮೀರ ಪ್ರವಾಸದಲ್ಲಿದ್ದ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಲ್ಲಿನ ಪಂಡಿತರು ಹಾಗೂ ತಮ್ಮ ಕುಟುಂಬಕ್ಕೂ ಅವಿನಾಭಾವ ನಂಟಿದೆ. ಕಾಶ್ಮೀರಿ ಪಂಡಿತರಿಗಾಗಿ ನಾನು ಏನಾದ್ರೊಂದು ಮಾಡ್ತೀನಿ ಎಂಬುದಾಗಿ ಹೇಳಿಕೆ ನೀಡಿದ್ದರು.

ರಾಹುಲ್ ಗಾಂಧಿ ಅವರ ಈ ಹೇಳಿಕೆಗೆ ಬಿಜೆಪಿ ಟಾಂಗ್ ಕೊಟ್ಟಿದೆ.

ಈ ಬಗ್ಗೆ ಪತ್ರಿಕಾಗೋಷ್ಟಿ ನಡೆಸಿದ ಬಿಜೆಪಿ ವಕ್ತಾರ ಸಂಬಿತ್ ಪಾತ್ರ, ಜಮ್ಮು- ಕಾಶ್ಮೀರದ ಸಮಸ್ಯೆಗಳು 'ಗಾಂಧಿ ಕುಟುಂಬದ ಪಾರಂಪರಿಕ ಬಳುವಳಿ' ಎಂದು ಟೀಕಿಸಿದ್ದಾರೆ. ಈ ಕುರಿತು ಶುಕ್ರವಾರ ಮಾಧ್ಯಮಗೋಷ್ಠಿ ನಡೆಸಿರುವ ಬಿಜೆಪಿ ಮುಖಂಡ ಸಂಬಿತ್‌ ಪಾತ್ರ, 'ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಕಾಶ್ಮೀರಿ ಪಂಡಿತರನ್ನು ಮಾತ್ರವಲ್ಲದೇ ಈ ಪ್ರದೇಶದ ಅಭಿವೃದ್ಧಿಯನ್ನೂ ಕಾಂಗ್ರೆಸ್ ಗಾಳಿಗೆ ತೂರಿದೆ' ಎಂದು ಆರೋಪಿಸಿದ್ದಾರೆ.

Edited By : Nagaraj Tulugeri
PublicNext

PublicNext

11/09/2021 03:18 pm

Cinque Terre

34.14 K

Cinque Terre

1

ಸಂಬಂಧಿತ ಸುದ್ದಿ