ಚಿತ್ರದುರ್ಗ: ಕೇಂದ್ರದಲ್ಲಿ 60 ವರ್ಷ ಹಾಗೂ ರಾಜ್ಯದಲ್ಲಿ 10 ವರ್ಷಗಳ ಕಾಲ ಕಾಂಗ್ರೆಸ್ ಸರ್ಕಾರ ಇದ್ದರೂ ಕೂಡ ಕೃಷಿ ವಲಯದಲ್ಲಿ ಬದಲಾವಣೆ ತರಲಿಲ್ಲ ಎಂದು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಶ್ರೀರಾಮುಲು ಅಸಮಾಧಾನ ವ್ಯಕ್ತಪಡಿಸಿದರು. ಅವರು ಚಳ್ಳಕೆರೆಯಲ್ಲಿ ರೈತ ಮೋರ್ಚ ಸಭೆಯಲ್ಲಿ ಮಾತನಾಡಿದರು.
ದೇಶದ ಪ್ರಧಾನಿ ಮೋದಿ ಕೃಷಿ ಕ್ಷೇತ್ರದಲ್ಲಿ ಬದಲಾವಣೆ ತರಬೇಕು ಎನ್ನುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅದೇ ರೀತಿ ಹಿಂದಿನ ಸಿಎಂ ಯಡಿಯೂರಪ್ಪ ಹಾಗೂ ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಅವರೂ ಕೂಡ ಕೃಷಿಕ್ಷೇತ್ರ ಸೇರಿದಂತೆ ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಭದ್ರಾ ಮೇಲ್ದಂಡೆಯಿಂದ ವಾಣಿ ವಿಲಾಸ ಜಲಾಶಯಕ್ಕೆ ನೀರು ಬೇಕು ಎನ್ನುವುದಕ್ಕೆ ಹಲವಾರು ದಶಕಗಳ ಹೋರಾಟ ಮಾಡಬೇಕಾಯಿತು. ಕಾಂಗ್ರೆಸ್ ನವರ ಕೈಯಲ್ಲಿ ಕೆರೆಗಳಿಗೆ ಭದ್ರಾ ಮೇಲ್ದಂಡೆ ಯೋಜನೆಯಿಂದ ನೀರು ತುಂಬಿಸಲು ಆಗಲಿಲ್ಲ ಎಂಬ ಮಾತನ್ನು ಒಪ್ಪಿಕೊಳ್ಳಬೇಕಾಗುತ್ತದೆ.
ಭದ್ರಾದಿಂದ ವಿವಿ ಸಾಗರಕ್ಕೆ ನೀರು ಹರಿಸಲು ಹಿಂದಿನ ನೀರಾವರಿ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಅವರು ನೀರು ಬಿಡಿಸುವ ಕೆಲಸ ಮಾಡಿದರು. ಇದು ಈ ಭಾಗದ ಜನರಲ್ಲಿ ಸಂತಸ ತಂದಿದೆ ಎಂದು ಶ್ರೀರಾಮುಲು ತಿಳಿಸಿದರು..
PublicNext
11/09/2021 05:45 pm