ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

70 ವರ್ಷಗಳಲ್ಲಿ ಕಾಂಗ್ರೆಸ್‌ ಕಟ್ಟಿದ ಎಲ್ಲವನ್ನೂ ಬಿಜೆಪಿ ಮಾರುತ್ತಿದೆ: ರಾಹುಲ್ ಗಾಂಧಿ ಕಿಡಿ

ನವದೆಹಲಿ: ಕಾಂಗ್ರೆಸ್ ಪಕ್ಷ ಯಾವಾಗಲೂ ದೇಶ ಕಟ್ಟಲು ಗಮನ ಹರಿಸುತ್ತದೆ. ಆದರೆ ನಮ್ಮ ಪಕ್ಷದ 70 ವರ್ಷಗಳ ಶ್ರಮವನ್ನು ಬಿಜೆಪಿಯವರು ಕೇವಲ 7 ವರ್ಷಗಳಲ್ಲಿ ಮಾರಾಟ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ, ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ನ್ಯಾಷನಲ್‌ ಸ್ಟೂಡೆಂಟ್ಸ್ ಯೂನಿಯನ್‌ ಆಫ್‌ ಇಂಡಿಯಾದ (ಎನ್‌ಎಸ್‌ಯುಐ) ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಉದ್ದೇಶಿಸಿ ಶನಿವಾರ ಮಾತನಾಡಿರುವ ಅವರು, 'ಮುಂಬೈನಲ್ಲಿ ಭಯೋತ್ಪಾದಕ ದಾಳಿ ನಡೆದ ಸಂದರ್ಭದಲ್ಲಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರನ್ನು ದುರ್ಬಲ ಪ್ರಧಾನಿ ಎಂದು ಕರೆಯಲಾಗುತ್ತಿತ್ತು. ಆದರೆ ಪುಲ್ವಾಮಾ ದಾಳಿಯ ಸಂದರ್ಭದಲ್ಲಿ ಮಾಧ್ಯಮಗಳು ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಲಿಲ್ಲವೇಕೆ’ ಎಂದು ಪ್ರಶ್ನಿಸಿದ್ದಾರೆ.

Edited By : Vijay Kumar
PublicNext

PublicNext

12/09/2021 09:19 am

Cinque Terre

54.64 K

Cinque Terre

28

ಸಂಬಂಧಿತ ಸುದ್ದಿ