ಬೆಂಗಳೂರು : ಇಂದಿನಿಂದ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಲಿದೆ. ರಾಜ್ಯ ಸರ್ಕಾರಕ್ಕೆ ಇಂದು ಮೊದಲ ದಿನವೇ ಪ್ರತಿಭಟನೆಯ ಬಿಸಿ ತಟ್ಟಲಿದೆ. ಕೇಂದ್ರ ಕೃಷಿ ಕಾಯಿದೆ ವಿರೋಧಿಸಿ ಇಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ರಾಜ್ಯ ರೈತ ಸಂಘಟನೆ ನಿರ್ಧರಿಸಿದೆ.
ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆ ಅಧಿವೇಶನದ ಆರಂಭದಲ್ಲೇ ಸರ್ಕಾರಕ್ಕೆ ರೈತ ಸಂಘಟನೆಗಳು ಬಿಸಿ ಮುಟ್ಟಿಸಲಿದೆ.ಕೃಷಿ ಕಾಯಿದೆ ಅನುಷ್ಟಾನ ಸಂಬಂಧ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸುಗ್ರೀವಾಜ್ಞೆ ಮತ್ತು ಕೃಷಿ ಕಾಯಿದೆಯನ್ನು ವಿಧಾನಸಭೆಯಲ್ಲಿ ಅಂಗೀಕರಿಸಲು ಮುಂದಾಗಿರುವ ರಾಜ್ಯ ಸರ್ಕಾರದ ನಡೆ ವಿರೋಧಿಸಿ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ರೈತ ಸಂಘಟನೆಗಳು ಸಜ್ಜಾಗಿದ್ದು, ಇಂದು ಬೆಳಗ್ಗೆ 11:30 ಕ್ಕೆ ಪ್ರತಿಭಟನೆ ಆರಂಭಿಸಲಿದೆ.
PublicNext
13/09/2021 07:59 am