ಬೆಂಗಳೂರು: ಇಂದಿನಿಂದ ವಿಧಾನ ಮಂಡಲ ಅಧಿವೇಶನ ಶುರುವಾಗಿದೆ. ಚಕ್ಕಡಿ ಮೆರವಣಿಗೆ ಮೂಲಕ ಅಧಿವೇಶನಕ್ಕೆ ಬರೋದಾಗಿ ಕಾಂಗ್ರೆಸ್ ಹೇಳಿತ್ತು. ಅದರಂತೆ ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಉಳಿದ ನಾಯಕರು ಚಕ್ಕಡಿ ಮೆರವಣಿಗೆ ಮೂಲಕ ವಿಧಾನಸೌಧಕ್ಕೆ ಬಂದಿದ್ದಾರೆ.
ನಗರದ ಪ್ರಮುಖ ರಸ್ತೆಗಳಲ್ಲಿ ನಡೆದ ಚಕ್ಕಡಿ ಮೆರವಣಿಗೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಈಶ್ವರ್ ಖಂಡ್ರೆ, ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್ ಪಾಟೀಲ್, ಎಂ.ಬಿ ಪಾಟೀಲ್ ಸೇರಿದಂತೆ ಇತರ ನಾಯಕರು ಪಾಲ್ಗೊಂಡಿದ್ದರು.
ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಯುವಾಗ ಸುಮಾರು ಹೊತ್ತು ಸಂಚಾರ ದಟ್ಟಣೆ ಹಾಗೂ ಅಡಚಣೆ ಉಂಟಾಗಿತ್ತು.
PublicNext
13/09/2021 11:20 am