ಬೆಂಗಳೂರು: ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದವರೆಗೆ ಎತ್ತಿನ ಗಾಡಿ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ನಾಲ್ಕು ಎತ್ತಿನ ಗಾಡಿ ಸಹಿತ ನೂರಕ್ಕೂ ಅಧಿಕ ಪ್ರತಿಭಟನಾಕಾರರನ್ನು ವಿಂಡ್ಸನ್ ಮ್ಯಾನರ್ ಸರ್ಕಲ್ ಬಳಿ ಪೊಲೀಸರು ತಡೆದು ಬ್ಯಾರಿಕೇಡ್ ಹಾಕಿದರು. ಇದರ ವಿರುದ್ಧ ಆಕ್ರೋಶಿತರಾದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿಧಾನಸೌಧದ ಆವರಣಕ್ಕೆ ಎತ್ತಿನಗಾಡಿ ಬಿಟ್ಟರೆ ಏನಾಗುತ್ತೆ? ಆಕಾಶ ಬಿದ್ದು ಹೋಗುತ್ತಾ ಎಂದು ಪೊಲೀಸರ ವಿರುದ್ಧ ಕಿಡಿ ಕಾರಿದರು. ವಿಧಾನಸೌಧದ ಗೇಟ್ ನಂಬರ್ 1ರ ಬಳಿ ಎತ್ತಿನಗಾಡಿ ಹೋಗಲು ಬಿಡಿ, ಇಲ್ಲ ಅಂದ್ರೆ ಮೇಲೆ ಓಡಿಸುತ್ತೇವೆ ಎಂದು ಪೊಲೀಸರ ಜೊತೆ ಕಾಂಗ್ರೆಸ್ ಕಾರ್ಯಕರ್ತರು ಕೆಲಹೊತ್ತು ವಾಗ್ವಾದ ನಡೆಸಿದರು.
PublicNext
13/09/2021 12:25 pm