ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ಕಾಂಗ್ರೆಸ್ ಮುಖಂಡ ಆಸ್ಕರ್ ಫರ್ನಾಂಡಿಸ್ ವಿಧಿವಶ

ಮಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್(80) ಅವರು ಇಂದು ಇಹಲೋಕ ತ್ಯಜಿಸಿದ್ದಾರೆ.

ಜು.18ರಂದು ಆಸ್ಕರ್ ಫರ್ನಾಂಡೀಸ್ ಅವರು ಮನೆಯಲ್ಲಿ ಯೋಗ ಮಾಡುತ್ತಿದ್ದ ಸಮಯದಲ್ಲಿ ಜಾರಿ ಬಿದ್ದಿದ್ದರು. ನಂತರ ಮಾಮೂಲಿ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ತೆರೆಳಿದಾಗ ತಲೆಯ ಒಳಭಾಗಕ್ಕೆ ಪೆಟ್ಟಾಗಿದ್ದು ತಿಳಿದುಬಂದಿತ್ತು. ಮಂಗಳೂರಿನ ಯೆನಪೋಯ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ. ಆಸ್ಕರ್ ಫರ್ನಾಂಡಿಸ್ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಆಸ್ಕರ್ ಫರ್ನಾಂಡಿಸ್ ಅವರು ಆಸ್ಪತ್ರೆಗೆ ದಾಖಲಾದ ಮಾಹಿತಿ ಪಡೆದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರು ಕುಟುಂಬಿಕರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಚಿವ ಎಂ.ಬಿ.ಪಾಟೀಲ್ ಮುಂತಾದವರು ಮಂಗಳೂರಿನ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.

Edited By : Vijay Kumar
PublicNext

PublicNext

13/09/2021 02:39 pm

Cinque Terre

118.41 K

Cinque Terre

24

ಸಂಬಂಧಿತ ಸುದ್ದಿ