ಬೆಂಗಳೂರು: ಇಂದಿನಿಂದ ಹತ್ತು ದಿನಗಳ ಕಾಲ ವಿಧಾನ ಸಭೆ ಅಧಿವೇಶನ ನಡೆಯಲಿದೆ. ಬೆಲೆ ಏರಿಕೆ ಖಂಡಿಸಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿಧಾನಸೌಧಕ್ಕೆ ಎತ್ತಿನ ಗಾಡಿಯಲ್ಲಿ ತೆರಳುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ. ಈ ವಿಭಿನ್ನ ಪ್ರತಿಭಟನೆ ವೇಳೆ ಅವಘಡವೊಂದು ನಡೆದಿದ್ದು, ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.
ಹೌದು. ಸಿದ್ದರಾಮಯ್ಯ ಅವರು ಇದ್ದ ಎತ್ತಿನ ಬಂಡಿಯ ಎತ್ತು ಬೆದರಿ ಎಗರಿದ್ದು ಪರಿಣಾಮ ಬಂಡಿಯಲ್ಲಿ ಹಿಂದೆ ನಿಂತಿದ್ದ ಕಾಂಗ್ರೆಸ್ ನಾಯಕ ಮಾಜಿ ಡಿಸಿಎಂ ಜಿ. ಪರಮೇಶ್ವರ, ಜಿ. ಸಂಗಮೇಶ್, ಅಶೋಕ್ ಪಠಾಣ್,ಅಶೋಕ್ ಸಿಂಗ್ ಸೇರಿದಂತೆ ಇತರೆ ನಾಯಕರು ಕೆಳಗೆ ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಕಾರ್ಯಕರ್ತರು ಮೇಲೆ ಎಬ್ಬಿಸಿದರು.
PublicNext
13/09/2021 03:22 pm