ಗಾಂಧಿನಗರ: ಗುಜರಾತ್‌ನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.
59 ವರ್ಷದ ಭೂಪೇಂದ್ರ ಪಟೇಲ್ ಅವರು ಇದೇ ಮೊದಲ ಬಾರಿಗೆ ಅಂದ್ರೆ 2017ರ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದರು. ಅವರನ್ನು ನಿನ್ನೆ (ಭಾನುವಾರ) ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿತ್ತು.
ಗುಜರಾತ್ ರಾಜಭವನದಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಕೃಷಿ ಸಚಿವ ಹಾಗೂ ಗುಜರಾತ್ ರಾಜಕೀಯ ಬೆಳವಣಿಗೆಗಳ ಬಿಜೆಪಿ ವೀಕ್ಷಕ ನರೇಂದ್ರ ಸಿಂಗ್ ಥೋಮರ್, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ, ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಹರಿಯಾಣದ ಮುಖ್ಯಮಂತ್ರಿ ಮನೋಹರಲಾಲ್ ಕಟ್ಟರ್, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ನಿರ್ಗಮಿತ ಮುಖ್ಯಮಂತ್ರಿ ವಿಜಯ್ ರೂಪಾಣಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.
PublicNext
13/09/2021 04:15 pm