ಮಂಗಳೂರು: ನಿನ್ನೆ ನಿಧನರಾದ ಕೇಂದ್ರ ಸರ್ಕಾರದ ಮಾಜಿ ಸಚಿವ ಆಸ್ಕರ್ ಫರ್ನಾಂಡೀಸ್ ಅವರ ಅಂತಿಮ ದರ್ಶನಕ್ಕೆ ಮಂಗಳೂರು, ಉಡುಪಿ, ಬೆಂಗಳೂರಿನಲ್ಲಿ ವ್ಯವಸ್ಥೆ ಮಾಡಲಾಗಿದೆ.
ಇಂದು ಬೆಳಗ್ಗೆ 9.30ಕ್ಕೆ ಪಾರ್ಥಿವ ಶರೀರವನ್ನು ಉಡುಪಿಗೆ ಕೊಂಡೊಯ್ದು ಅಲ್ಲಿ ಚರ್ಚ್ ನಲ್ಲಿ ಪ್ರಾರ್ಥನೆ ನೆರವೇರಿಸಿದ ಬಳಿಕ 10.30ರಿಂದ ಮಧ್ಯಾಹ್ನ 2.30ರವರೆಗೆ ಉಡುಪಿ ಕಾಂಗ್ರೆಸ್ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಗುತ್ತದೆ. ಮಧ್ಯಾಹ್ನ 3ರಿಂದ 5ರವರೆಗೆ ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಮತ್ತೆ ಪಾರ್ಥಿವ ಶರೀರವನ್ನು ಫಾದಮುಲ್ಲರ್ ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗುವುದು. ಬುಧವಾರ ಬೆಳಗ್ಗೆ 10.30ಕ್ಕೆ ಮಂಗಳೂರಿನ ಮಿಲಾಗ್ರಿಸ್ ಚರ್ಚ್‌ನಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುತ್ತದೆ. ರಾಜ್ಯ, ರಾಷ್ಟ್ರಮಟ್ಟದ ನಾಯಕರು ಆಸ್ಕರ್ ಅಂತಿಮ ದರ್ಶನ ಪಡೆಯಲಿದ್ದಾರೆ.
ಇನ್ನು ಆಸ್ಕರ್ ಫರ್ನಾಂಡಿಸ್ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ಗುರುವಾರ ಬೆಂಗಳೂರಿನ ಸೇಂಟ್ ಪ್ರಾಟಿಕ್ ಚರ್ಚ್ ನಲ್ಲಿ ನಡೆಯಲಿದೆ. ರಾಷ್ಟ್ರೀಯ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅಥವಾ ಪ್ರಿಯಾಂಕಾ ಗಾಂಧಿ ವಾದ್ರ ಭಾಗವಹಿಸುವ ಸಾಧ್ಯತೆ ಇದೆ. ಸೋಮವಾರ ಮಧ್ಯಾಹ್ನವೇ ಆಸ್ಕರ್ ಪಾರ್ಥಿವ ಶರೀರವನ್ನು ಯೇನೆಪೋಯ ಆಸ್ಪತ್ರೆಯಿಂದ ಫಾದರ್ ಮುಲ್ಲರ್ ಆಸ್ಪತ್ರೆಗೆ ಕೊಂಡೊಯ್ದು ಶವಾಗಾರದಲ್ಲಿ ಇರಿಸಲಾಗಿತ್ತು.
PublicNext
14/09/2021 06:44 pm