ಅಲಿಗಢ: ಯೋಗಿ ಆದಿತ್ಯನಾಥ್ ಸಿಎಂ ಆದ ಮೇಲೆ ಉತ್ತರ ಪ್ರದೇಶದಲ್ಲಿ ಆಡಳಿತ ಸುಧಾರಣೆಯಾಗಿದೆ. 2017ಕ್ಕೂ ಮುನ್ನ ಉತ್ತರ ಪ್ರದೇಶವನ್ನು ಭೂಗತ ಪಾತಕಿಗಳು ಆಳುತ್ತಿದ್ದರು. ಆದರೆ, ಈಗ ಮುಖ್ಯಮಂತ್ರಿ ದುಷ್ಕರ್ಮಿಗಳನ್ನು ಜೈಲಿಗೆ ಕಳುಹಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಅಲಿಗಢದಲ್ಲಿ ರಾಜ ಮಹೇಂದ್ರ ಪ್ರತಾಪ್ ಸಿಂಗ್ ರಾಜ್ಯ ವಿಶ್ವವಿದ್ಯಾಲಯಕ್ಕೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಮೋದಿ, ಈ ಮುನ್ನ ಬಡವರಿಗಾಗಿ ರೂಪಿಸಿದ ಸಮಾಜ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸಲು ತಡೆಯೊಡ್ಡಲಾಗಿತ್ತು. ಆದರೆ, ಈಗ ಅಂತಹ ಯಾವುದೇ ರೀತಿಯ ಅಡೆತಡೆಗಳಿಲ್ಲ. ಯೋಜನೆಯ ಪ್ರಯೋಜನಗಳು ಅಗತ್ಯ ಇದ್ದವರಿಗೆ ತಲುಪುತ್ತಿವೆ ಎಂದು ಹೇಳಿದ್ದಾರೆ.
PublicNext
15/09/2021 03:33 pm