ಮಂಗಳೂರು: ಸೋಮವಾರ ಇಹಲೋಕ ತ್ಯಜಿಸಿರುವ ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ ಅವರ ಪಾರ್ಥಿವ ಶರೀರ ಇಂದು ಸಂಜೆ 5 ಗಂಟೆಗೆ ವಿಶೇಷ ವಿಮಾನದ ಮೂಲಕ ಮಂಗಳೂರಿನಿಂದ ಬೆಂಗಳೂರಿಗೆ ಏರ್ ಲಿಫ್ಟ್ ಆಯಿತು.
ಆಸ್ಕರ್ ಪಾರ್ಥಿವ ಶರೀರವನ್ನು ಆಂಬ್ಯುಲೆನ್ಸ್ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಕೊಂಡೊಯ್ದು, ಅಲ್ಲಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ರವಾನೆಯಾಗಿದೆ. ಈ ವಿಶೇಷ ವಿಮಾನದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಆಸ್ಕರ್ ಕುಟುಂಬಸ್ಥರು ಸೇರಿ ಸುಮಾರು 42 ಮಂದಿ ಬೆಂಗಳೂರಿಗೆ ತೆರಳಿದಾರೆ.
ನಾಳೆ ಕೆಪಿಸಿಸಿ ಕಚೇರಿಯಲ್ಲಿ ಆಸ್ಕರ್ ಪಾರ್ಥಿವ ಶರೀರದ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಸೇರಿದಂತೆ ರಾಷ್ಟ್ರಮಟ್ಟದ ನಾಯಕರು ನಾಳೆ ಬೆಂಗಳೂರಿಗೆ ಆಗಮಿಸಿ ಆಸ್ಕರ್ ಪಾರ್ಥಿವ ಶರೀರದ ಅಂತಿಮ ದರ್ಶನ ಮಾಡುವ ಸಾಧ್ಯತೆ ಇದೆ. ಬಳಿಕ ಬೆಂಗಳೂರಿನ ಸೈಂಟ್ ಪೆಟ್ರಿಕ್ಸ್ ಚರ್ಚ್ನಲ್ಲಿ ಆಸ್ಕರ್ ಅಂತ್ಯ ಸಂಸ್ಕಾರ ನಡೆಯಲಿದೆ.
PublicNext
15/09/2021 06:53 pm