ಹೈದರಾಬಾದ್: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗಳನ್ನು ಎನ್‌ಕೌಂಟರ್ ಮಾಡಿ ಕೊಲ್ಲಲಾಗುವುದು ಎಂದು ತೆಲಂಗಾಣ ಕಾರ್ಮಿಕ ಸಚಿವ ಮಲ್ಲಾ ರೆಡ್ಡಿ ಭರವಸೆ ನೀಡಿದ್ದಾರೆ. ಅವರ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಹೈದರಾಬಾದಿನ ಸೈದಾಬಾದ್‌ನಲ್ಲಿ 6 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಚಿವರು, "ನಾವು ಆರೋಪಿಗಳನ್ನು ಖಂಡಿತವಾಗಿಯೂ ಬಂಧಿಸುತ್ತೇವೆ ಮತ್ತು ಎನ್‌ಕೌಂಟರ್ ಮಾಡುತ್ತೇವೆ. ನಾವು ಖಂಡಿತವಾಗಿಯೂ ಮೃತ ಬಾಲಕಿಯ ಕುಟುಂಬ ಸದಸ್ಯರನ್ನು ಭೇಟಿಯಾಗಿ ಅವರಿಗೆ ಪರಿಹಾರ ನೀಡುತ್ತೇವೆ. ನಾವು ಕುಟುಂಬಕ್ಕೆ ಸಹಾಯ ಮಾಡುತ್ತೇವೆ" ಎಂದು ಹೇಳಿದ್ದಾರೆ.
PublicNext
15/09/2021 08:31 pm