ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೋದಿ ಜನ್ಮದಿನ ನಮಗೆ ನಿರುದ್ಯೋಗ ದಿನ ಎಂದ ಕಾಂಗ್ರೆಸ್

ನವದೆಹಲಿ: ನಾಳೆ ಸೆಪ್ಟಂಬರ್‌ 17ರಂದು ಪ್ರಧಾನಿ ನರೇಂದ್ರ ಮೋದಿ ಜನ್ಮದಿನ. ಈ ದಿನವನ್ನು ನಾವು ರಾಷ್ಟ್ರೀಯ ನಿರುದ್ಯೋಗ ದಿನ ಆಚರಿಸಲಿದ್ದೇವೆ ಎಂದು ಕಾಂಗ್ರೆಸ್ ಹೇಳಿದೆ. ಈಗಾಗಲೇ ಕಾಂಗ್ರೆಸ್ ಕಾರ್ಯಕರ್ತರು ಇದಕ್ಕಾಗಿ ತಯಾರಿ ನಡೆಸಿದ್ದಾರೆ.

ಮೋದಿ ಅವರ ಆಡಳಿತದಲ್ಲಿ ಯುವಕರು ಉದ್ಯೋಗವಿಲ್ಲದೆ ಬೀದಿಪಾಲಾಗಿದ್ದು, ಯಾವುದೇ ಪ್ರಯೋಜನ ಲಭಿಸಿಲ್ಲ ಎಂದು ಆರೋಪಿಸಿ ಅವರ ಹುಟ್ಟು ಹಬ್ಬವನ್ನು "ರಾಷ್ಟ್ರೀಯ ನಿರುದ್ಯೋಗ ದಿನ"ವನ್ನಾಗಿ ಆಚರಿಸಲು ಯುವ ಕಾಂಗ್ರೆಸ್ ಕರೆ ಕೊಟ್ಟಿದೆ. ಮೋದಿ ಜನ್ಮದಿನವಾದ ಸೆಪ್ಟೆಂಬರ್ 17 ರಂದು ದೇಶಾದ್ಯಂತ ವಿವಿಧ ಪ್ರತಿಭಟನೆಗಳನ್ನು ನಡೆಸಲು ನಿರ್ಣಯಿಸಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಏಳೂವರೆ ವರ್ಷದ ಆಡಳಿತದಲ್ಲಿ ನಿರುದ್ಯೋಗಿಗಳಿಗೆ ಅನುಕೂಲವಾಗುವಂತಹ ಯಾವುದೇ ಕ್ರಮ ಕೈಗೊಂಡಿಲ್ಲ. ಖಾಲಿ ಇರುವ ಉದ್ಯೋಗ ಭರ್ತಿಗೂ ಕ್ರಮ ಕೈಗೊಂಡಿಲ್ಲ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಆರೋಪಿಸಿದ್ದಾರೆ.

ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸಲಾಗುವುದು ಎಂದು ನರೇಂದ್ರ ಮೋದಿ ಅಧಿಕಾರಕ್ಕೆ ಬರುವ ಮುನ್ನ ದೇಶದ ಯುವಕರು ಆಶ್ವಾಸನೆ ನೀಡಿದ್ದರು. ಉದ್ಯೋಗವಿಲ್ಲದೆ ಯುವಕರು ರಸ್ತೆಗಳಲ್ಲಿ ತಿರುಗಾಡುತ್ತಿದ್ದರೆ, ಕೇಂದ್ರ ಸರ್ಕಾರ ಮಾತ್ರ ದೊಡ್ಡ ಸಾಧನೆ ಮಾಡಿದ್ದೇವೆ ಎಂದು ಹೇಳಿಕೊಂಡು ಪ್ರಚಾರ ಮಾಡುತ್ತಿವೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ದೇಶದಲ್ಲಿ ಒಂದೇ ವರ್ಷದಲ್ಲಿ ನಿರುದ್ಯೋಗ ಪ್ರಮಾಣ ಶೇ 2.4 ರಿಂದ 10.3 ಕ್ಕೆ ಏರಿಕೆಯಾಗಿದೆ ಎಂದು ವಿವರಿಸಿದ್ದಾರೆ.

Edited By : Nagaraj Tulugeri
PublicNext

PublicNext

16/09/2021 07:34 am

Cinque Terre

67.99 K

Cinque Terre

57

ಸಂಬಂಧಿತ ಸುದ್ದಿ