ಚಿಕ್ಕಮಗಳೂರು: ಮೈಸೂರಿನಲ್ಲಿನ ದೇವಸ್ಥಾನ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿರುವ ಹಿಂದೂ ಪರ ಕಾರ್ಯಕರ್ತರು ಇಂದು ಮೂಡಿಗೆರೆಯಲ್ಲಿ ಬಿಜೆಪಿ ಸಂಸದರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಮೂಡಿಗೆರೆ ಬಸ್ ನಿಲ್ದಾಣದ ಸಮೀಪದಲ್ಲಿ ಈ ಘಟನೆ ನಡೆದಿದೆ. ಸಂಸದರಾದ ತೇಜಸ್ವಿ ಸೂರ್ಯ ಹಾಗೂ ಪ್ರತಾಪ್ ಸಿಂಹಗೆ ಮುತ್ತಿಗೆ ಹಾಕಲು ಯತ್ನಿಸಿದರು. ದೇವಸ್ಥಾನಗಳನ್ನು ಕೆಡವುತ್ತಿರುವುದನ್ನು ವಿರೋಧಿಸಿ ಕಾರ್ಯಕರ್ತರು ಕಪ್ಪುಪಟ್ಟಿ ಪ್ರದರ್ಶನ ಮಾಡಿ ಆಕ್ರೋಶ ಹೊರ ಹಾಕಿದರು.
PublicNext
16/09/2021 04:37 pm