ನವದೆಹಲಿ: ಜೆಎನ್ಯು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯಕುಮಾರ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬುದು ಕೇವಲ ವದಂತಿ. ಈ ವದಂತಿ ಹಬ್ಬಿಸಿರುವುದರ ಹಿಂದೆ ದುರುದ್ದೇಶ ಇದೆ ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ.ರಾಜಾ ಹೇಳಿದ್ದಾರೆ.
ಕನ್ಹಯ್ಯಕುಮಾರ್ ಅವರೊಂದಿಗೆ ಸಭೆ ನಡೆಸಿದ ನಂತರ ಮಾತನಾಡಿದ ಅವರು ಇದು ಕೇವಲ ಊಹಾಪೋಹ ಎಂದಿದ್ದಾರೆ. ಕನ್ಹಯ್ಯ ಕುಮಾರ್ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸದಸ್ಯರಾಗಿದ್ದು, ಕಳೆದ ಎರಡು ದಿನಗಳ ಕಾಲ ಪಕ್ಷದ ಕಚೇರಿಯಲ್ಲಿ ಅವರೊಂದಿಗೆ ಸಭೆ ನಡೆಸಲಾಗಿದೆ. ದುರುದ್ದೇಶಪೂರಿತ ಊಹಾಪೋಹಾಗಳು ಕೇವಲ ವದಂತಿಗಳು, ಅವುಗಳನ್ನು ಖಂಡಿಸುವುದಾಗಿ ರಾಜಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.
PublicNext
18/09/2021 09:06 am