ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಿರುದ್ಯೋಗ ಸಮಸ್ಯೆಗೆ 60 ವರ್ಷಗಳ ಕಾಂಗ್ರೆಸ್ ದುರಾಡಳಿತವೇ ಕಾರಣ: ಶ್ರೀರಾಮುಲು ಟೀಕೆ

ಚಿತ್ರದುರ್ಗ : ದೇಶದಲ್ಲಿ 60 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷ ಆಡಳಿತ ನಡೆಸಿದ ಪರಿಣಾಮವಾಗಿ ದೇಶದಲ್ಲಿ ನಿರುದ್ಯೋಗ ಸಮಸ್ಯೆಗೆ ಕಾರಣ ಎಂದು ಸಾರಿಗೆ ಸಚಿವ ಶ್ರೀರಾಮುಲು ಕಾಂಗ್ರೆಸ್ ಪಕ್ಷವನ್ನು ಟೀಕಿಸಿದರು.

ಚಿತ್ರದುರ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದವರು ಅಧಿಕಾರಕ್ಕೆ ಬರಲು ಹಗಲು ಕನಸು ಕಾಣುತ್ತಿದ್ದಾರೆ. ಅವರು ಏನೇ ಹಗಲು ಕನಸು ಕಂಡರೂ 2023 ರ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವುದರ ಮೂಲಕ ನಮ್ಮ ಸರ್ಕಾರ ಕರ್ನಾಟಕದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಸ್ಪಷ್ಟವಾಗಿ ತಿಳಿಸಿದರು. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಾಬಲ್ಯ ಕಡಿಮೆಯಾಗಲಿದೆ. ಇದಕ್ಕೆ ಸಾಕ್ಷಿ ಈ ಹಿಂದೆ ನಡೆದ ಮೂರು ಪಾಲಿಕೆ ಚುನಾವಣೆಗಳ ಫಲಿತಾಂಶ. ಈ ಚುನಾವಣೆಗಳ ಫಲಿತಾಂಶ ಮುಂಬರುವ ಚುನಾವಣೆಗಳ ದಿಕ್ಸೂಚಿ ಎಂದು ಹೇಳಿದರು.

ಕಾಂಗ್ರೆಸ್ ನವರು ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಸಲುವಾಗಿ ನಿರುದ್ಯೋಗ ದಿವಸ್ ಆಚರಣೆ ಮಾಡಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು. ನಮ್ಮ ಸರ್ಕಾರ ಬಡವರ ಪರವಾಗಿ, ನಿರ್ಗತಿಕರ ಪರವಾಗಿ ಹಾಗೂ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಿಕೊಂಡು ಬರುತ್ತಿದೆ.

ಪ್ರಧಾನಮಂತ್ರಿ ನರೇಂದ್ರ ರಾಜ್ಯದಲ್ಲಿ ನಾವು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ಬಡತನ, ನಿರುದ್ಯೋಗ ಸಮಸ್ಯೆ, ನೆರೆಹಾವಳಿಯನ್ನು ಯಶಸ್ವಿಯಾಗಿ ಎದುರಿಸಿದ್ದೇವೆ ಎಂದರು. ರಾಜ್ಯದಲ್ಲಿ ನಿನ್ನೆ ದಿನವೊಂದಕ್ಕೆ 75 ಸಾವಿರ ಜನರಿಗೆ ಕೊವಿಡ್ -19 ಲಸಿಕೆ ನೀಡಿದ್ದೇವೆ ಎಂದು ತಿಳಿಸಿದರು. ಈಗಾಗಲೇ ಶಾಲಾ-ಕಾಲೇಜುಗಳು ಪ್ರಾರಂಭವಾಗಿವೆ. ಮಕ್ಕಳಿಗೆ ತೊಂದರೆಯಾಗದಂತೆ ಬಸ್ ವ್ಯವಸ್ಥೆ ಮಾಡಲಾಗುವುದು ಎಂದರು.

ಇನ್ನು ಮೊನ್ನೆ ನಡೆದ ಮೂರು ಪಾಲಿಕೆಗಳ ಫಲಿತಾಂಶ ಪ್ರಕಟಗೊಂಡಿದ್ದು ಮೂರರಲ್ಲಿ ಬಿಜೆಪಿ ಪಕ್ಷ ಅಧಿಕಾರ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪೆಟ್ರೋಲ್, ಡಿಸೇಲ್ ಹಾಗೂ ದಿನನಿತ್ಯದ ವಸ್ತುಗಳ ಬಳಕೆ ಬೆಲೆ ಆಗುತ್ತಿವೆ ಅದಕ್ಕೆ ಕಾರಣ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಗುತ್ತಿರುವ ಬೆಲೆಯ ಬದಲಾವಣೆಯಿಂದ ಆಗುತ್ತಿವೆ ಎಂದು ಹೇಳಿದರು. ನಿಮ್ಮ ಸರ್ಕಾರಗಳು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಯಾವ ಮಟ್ಟದಲ್ಲಿ ಬೆಲೆಗಳಿವೆ ಎಂಬುದನ್ನು ಪರಿಶೀಲನೆ ಮಾಡಿಕೊಳ್ಳಲಿ ಎಂದು ಕಾಂಗ್ರೆಸ್ ಪಕ್ಷಕ್ಕೆ ಸಚಿವರು ಮರು ಪ್ರಶ್ನೆ ಹಾಕಿದರು. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ದೇವಸ್ಥಾನ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು ಗಮನಕ್ಕೆ ಬಾರದೆ ದೇವಸ್ಥಾನ ಗಳನ್ನು ತೆರವುಗೊಳಿಸಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಿದ್ದೇವೆ ಎಂದರು.

ಜೆಡಿಎಸ್ ಪಕ್ಷ ಅಧಿಕಾರದ ಅವಧಿಯಲ್ಲಿ ಒಳ್ಳೆ ಕೆಲಸ ಮಾಡಿದೆ ಎಂದು ಜೆಡಿಎಸ್ ಪಕ್ಷವನ್ನು ಹೊಗಳಿದರು. ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಬಾರದು. ಮುಂದಿನ ದಿನಗಳಲ್ಲಿ ಯಾರು ಯಾರ ಮನೆಗೆ ಹೋಗುತ್ತಾರೆ ಎಂಬುದನ್ನು ಕಾದು ನೋಡೋಣ ಎಂದು ಮಾಜಿ ಪ್ರಧಾನಿ ದೇವೇಗೌಡ ಅವರ ಹೇಳಿಕೆಗೆ ಪರೋಕ್ಷವಾಗಿ ಟಾಂಗ್ ನೀಡಿದರು.

Edited By : Nagaraj Tulugeri
PublicNext

PublicNext

18/09/2021 01:09 pm

Cinque Terre

47.12 K

Cinque Terre

47

ಸಂಬಂಧಿತ ಸುದ್ದಿ