ನವದೆಹಲಿ: ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರನ್ನು ಬದಲಾವಣೆ ಮಾಡಬೇಕೆಂಬ ಎಂಬ ಸುದ್ದಿ ಮತ್ತೆ ಮುನ್ನೆಲೆಗೆ ಬಂದಿದೆ. ಈ ಕುರಿತು ಕನಿಷ್ಠ 40 ಶಾಸಕರು ಶಾಸಕಾಂಗ ಪಕ್ಷದ ಸಭೆಗೆ ಒತ್ತಾಯಿಸಿ ಕಾಂಗ್ರೆಸ್ ಹೈಕಮಾಂಡ್ ಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
ಶಾಸಕರ ಬೇಡಿಕೆಯನ್ನು ಅನುಸರಿಸಿ, ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಇಂದು ಸಂಜೆ 5 ಗಂಟೆಗೆ ರಾಜ್ಯದ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯನ್ನು ಕರೆದಿದೆ.
ಈ ಬಗ್ಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಾರ್ಯದರ್ಶಿ ಮತ್ತು ಪಂಜಾಬ್ ವ್ಯವಹಾರಗಳ ಉಸ್ತುವಾರಿ ಹರೀಶ್ ರಾವತ್ ಘೋಷಿಸಿದ್ದಾರೆ. ಪಂಜಾಬ್ ನ ಕಾಂಗ್ರೆಸ್ ಶಾಸಕರು ಶಾಸಕಾಂಗ ಪಕ್ಷದ (ಸಿಎಲ್ ಪಿ) ಸಭೆಯನ್ನು ತಕ್ಷಣವೇ ಕರೆಯಲು ವಿನಂತಿಸಿದೆ. ಅದರಂತೆ, ಸಿಎಲ್ ಪಿಯ ಸಭೆಯನ್ನು ಸೆಪ್ಟೆಂಬರ್ 18 ರಂದು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಸಂಜೆ 5 ಗಂಟೆಗೆ ಕರೆಯಲಾಗಿದೆ ಎಂದು ಹೇಳಿದ್ದಾರೆ.
ಇಂದು ಸಂಜೆ ಸಿಎಲ್ ಪಿ ಸಭೆಯಲ್ಲಿ ಹೊಸ ಸಿಎಂ ಮುಖವನ್ನು ಆಯ್ಕೆ ಮಾಡಲಾಗುವುದು ಎಂದು ಖಾಸಗಿ ಮಾಧ್ಯಮಗಳು ವರದಿ ಮಾಡಿದೆ. ಎಲ್ಲದಕ್ಕೂ ಸಭೆ ಬಳಿಕ ಉತ್ತರ ದೊರೆಯಲಿದೆ.
PublicNext
18/09/2021 03:50 pm