ಕೋಲ್ಕತ್ತ: ರಾಜಕೀಯದಿಂದ ದೂರ ಸರಿಯುವುದಾಗಿ ಘೋಷಿಸಿದ್ದ ಬಿಜೆಪಿ ಮಾಜಿ ನಾಯಕ ಬಾಬುಲ್ ಸುಪ್ರಿಯೋ ಟಿಎಂಸಿಗೆ ಸೇರ್ಪಡೆಯಾಗಿದ್ದಾರೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಯನ್ನು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಮತ್ತು ರಾಜ್ಯಸಭಾ ಸಂಸದ ಡೆರೆಕ್ ಒ'ಬ್ರೈನ್ ಅವರ ಸಮ್ಮುಖದಲ್ಲಿ ಸೇರ್ಪಡೆಗೊಂಡಿದ್ದಾರೆ.
ನಾನು ರಾಜಕಾರಣಕ್ಕೆ ಬಂದು ಬಹಳ ಸಮಯವಾಯಿತೇನೋ ಎನಿಸುತ್ತಿದೆ. ನನ್ನ ಅಧಿಕಾರಾವಧಿಯಲ್ಲಿ ಹಲವರಿಗೆ ಸಹಾಯ ಮಾಡಿದೆ, ಇನ್ನು ಕೆಲವರಿಗೆ ಬೇಸರವನ್ನೂ ಮಾಡಿದೆ. ಇದೀಗ ಗುಡ್ ಬೈ ಹೇಳುವ ಸಮಯ ಬಂದಿದೆ ಎಂದು ಬಾಬುಲ್ ಸುಪ್ರಿಯೋ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದರು.
ನಾನು ಬಿಜೆಪಿ ಪಕ್ಷ ಬಿಟ್ಟು ಬೇರಾವ ಪಕ್ಷಕ್ಕೂ ಹೋಗುತ್ತಿಲ್ಲ. ಟಿಎಂಸಿ, ಕಾಂಗ್ರೆಸ್, ಸಿಪಿಐಎಂ ಯಾವ ಪಕ್ಷವನ್ನೂ ಸೇರುತ್ತಿಲ್ಲ. ನನಗೆ ತಮ್ಮ ಪಕ್ಷಕ್ಕೆ ಬರಬೇಕೆಂದು ಯಾರೂ ಫೋನ್ ಕೂಡ ಮಾಡಿಲ್ಲ. ಕರೆದರೂ ನಾನು ಹೋಗುವುದಿಲ್ಲ. ನಾನು ಒಂದೇ ತಂಡದಲ್ಲಿ ಆಡುವ ಆಟಗಾರ! ಎಂದಿಗೂ ಅದೇ ತಂಡಕ್ಕೆ ನನ್ನ ಬೆಂಬಲ ಇರುತ್ತದೆ. ನಾನು ಮೊದಲಿನಿಂದಲೂ ಪಶ್ಚಿಮ ಬಂಗಾಳದ ಬಿಜೆಪಿ ಪಕ್ಷದಲ್ಲೇ ಗುರುತಿಸಿಕೊಂಡಿದ್ದೇನೆ. ಮುಂದೆ ಕೂಡ ಬೇರೆ ಪಕ್ಷವನ್ನು ಸೇರುವುದಿಲ್ಲ. ಇಷ್ಟು ಬಿಟ್ಟು ಬೇರೇನೂ ಹೇಳಲು ಸಾಧ್ಯವಾಗುತ್ತಿಲ್ಲ! ಎಂದು ಬಾಬುಲ್ ಸುಪ್ರಿಯೋ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದರು. ಆದರೆ, ಈ ಭಾಗವನ್ನು ಈ ಡಿಲೀಟ್ ಮಾಡಿದ್ದರು.
PublicNext
18/09/2021 04:00 pm