ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ: ಮೈಸೂರಿನಲ್ಲಿ ಆದ ಘಟನೆ ಮತ್ತೆ ಮರುಕಳಿಸದಂತೆ ಕ್ರಮ: ಸಿಎಂ ಬೊಮ್ಮಾಯಿ ಭರವಸೆ

ದಾವಣಗೆರೆ: ಮೈಸೂರಿನಲ್ಲಿ ನಡೆದ ದೇಗುಲಗಳ ತೆರವು ಅಚಾತುರ್ಯ ಘಟನೆ. ಶಾಂತಿ ಕದಡುವ ವಿಚಾರಗಳಿಗೆ ಪೂರ್ಣ ವಿರಾಮ ಹಾಡುವ ನಿಟ್ಟಿನಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು. ಇಂಥ ಘಟನೆ ಮರುಕಳಿಸದಂತೆ ಎಚ್ಚರ ವಹಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ದಾವಣಗೆರೆಯ ತ್ರಿಶೂಲ್ ಸಭಾಭವನದಲ್ಲಿ ಏರ್ಪಡಿಸಿದ್ದ ಬಿಜೆಪಿ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಘಟನೆ ಬಗ್ಗೆ ಈಗಾಗಲೇ ಕಾನೂನು ಪಂಡಿತರು, ಪಕ್ಷದ ಹಿರಿಯರು, ಸಂಘದ ಮುಖಂಡರ ಜೊತೆ ಸಮಾಲೋಚನೆ ಮಾಡಿದ್ದೇನೆ. ದೇಗುಲ ತೆರವು ಮಾಡಿದ್ದು ಭಕ್ತರಿಗೆ ಘಾಸಿ ತಂದಿದೆ. ಇದನ್ನು ಸರಿಪಡಿಸುವ ಕೆಲಸ ಮಾಡಲಾಗುವುದು. ಯಾರೂ ಆತಂಕಪಡಬೇಕಿಲ್ಲ.‌ ಕಾನೂನಾತ್ಮಕವಾಗಿಯೂ ರಕ್ಷಣೆ ನೀಡ್ತೇವೆ. ಮತ್ತೆ ಈ ರೀತಿ ಆಗೋಲ್ಲ. ನಿಮ್ಮೆಲ್ಲರಿಗೂ ಒಪ್ಪಿಗೆ ಆಗುವ ರೀತಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಎಲ್ಲರಿಗೂ ಒಪ್ಪಿಗೆ ಆಗುವ ರೀತಿಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು. ಸಹಕಾರ ಇರಲಿ, ಸಹನೆಯಿಂದ ಇರಿ. ನಿಮ್ಮ ಮನಸ್ಸಿಗೆ ಮುಟ್ಟುವ ಹಾಗೆ ಕೆಲಸ ಮಾಡುತ್ತೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು.

ಮುಂಬರುವ ಜಿಲ್ಲಾ ಪಂಚಾಯತ್, ತಾ. ಪಂ, ವಿಧಾನ ಪರಿಷತ್, ಬಿಬಿಎಂಪಿ ಹಾಗೂ ಎರಡು ಉಪಚುನಾವಣೆಗಳಲ್ಲಿ ಗೆಲ್ಲಲು ರಣತಂತ್ರ ರೂಪಿಸಲಾಗುವುದು. ಈಗಾಗಲೇ ಈ ಬಗ್ಗೆ ಯಾವ ರೀತಿ ನಡೆಯಬೇಕೆಂಬ ಬಗ್ಗೆ ಸಮಾಲೋಚನೆ, ಚರ್ಚೆ ಮಾಡಲಾಗುತ್ತಿದೆ. ಸೊಸೈಟಿ ಇರಲಿ, ಲೋಕಸಭೆ ಇರಲಿ, ಎಲ್ಲಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಮೂರು ಮಹಾನಗರ ಪಾಲಿಕೆಯಲ್ಲಿ ಮೇಯರ್ ಪಟ್ಟ ಪಡೆಯುವುದು ಖಚಿತ. ಬಿಬಿಎಂಪಿಯಲ್ಲೂ ನಾವೇ ಸ್ವತಂತ್ರವಾಗಿ ಅಧಿಕಾರಕ್ಕೆ ಬರುವುದು ಖಚಿತ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

Edited By :
PublicNext

PublicNext

19/09/2021 04:33 pm

Cinque Terre

145.27 K

Cinque Terre

0

ಸಂಬಂಧಿತ ಸುದ್ದಿ