ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಬಿಜೆಪಿಗೆ ಕರೆತರಲು ಪ್ರಯತ್ನಿಸುತ್ತಿದ್ದೇನೆ ಎಂದು ಬಿಜೆಪಿ ಶಾಸಕ ರಾಜುಗೌಡ ಅವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ರಾಜುಗೌಡ, ಬಿಜೆಪಿ ಶಾಸಕರು ಯಾರೂ ಕಾಂಗ್ರೆಸ್ ಹೋಗುವುದಿಲ್ಲ. ಸಿದ್ದರಾಮಯ್ಯ ಅವರನ್ನೇ ಬಿಜೆಪಿಗೆ ಕರೆತರಲು ಯತ್ನಿಸುತ್ತಿದ್ದೇನೆ. ಈ ಪ್ರಯತ್ನದಲ್ಲಿ ಯಶಸ್ವಿಯಾಗುವ ವಿಶ್ವಾಸ ಇದೆ ಎಂದು ಹೇಳಿದ್ದಾರೆ.
ಬಿ.ಎಸ್.ಯಡಿಯೂರಪ್ಪ ಅವರು ಎದುರಾಳಿಗಳನ್ನು ಕಡೆಗಣಿಸುವಂತಿಲ್ಲ ಎಂದು ಹೇಳಿದ್ದಾರೆ. ಅವರು ಹೇಳಿದ್ದು ಯಾರನ್ನೂ ನಿರ್ಲಕ್ಷ್ಯ ಮಾಡಬೇಡಿ ಎಂಬ ಅರ್ಥದಲ್ಲಿ.ಹೀಗಾಗಿ ಕಾಂಗ್ರೆಸ್ ಶಾಸಕರೇ ಬಿಜೆಪಿಗೆ ಬರಲು ಕೇಳುತ್ತಿದ್ದಾರೆ. ಬಿಜೆಪಿ ಶಾಸಕರು ಯಾರೂ ಕಾಂಗ್ರೆಸ್‌ಗೆ ಹೋಗುವುದಿಲ್ಲ. ಕಾಂಗ್ರೆಸ್‌ನವರೇ ನಮ್ಮ ಪಕ್ಷಕ್ಕೆ ಬರುವುದಾಗಿ ಕೇಳುತ್ತಿದ್ದಾರೆ. ಆದರೆ ಇಲ್ಲಿ ಇರುವವರಿಗೇ ಅವಕಾಶ ಸಿಗುತ್ತಿಲ್ಲ. ಆದರೂ ಸಿದ್ದರಾಮಯ್ಯರನ್ನು ಬಿಜೆಪಿಗೆ ಕರೆತರಲು ಯತ್ನಿಸುತ್ತಿದ್ದೇನೆ ತಿಳಿಸಿದ್ದಾರೆ.
PublicNext
20/09/2021 12:42 pm