ಹುಬ್ಬಳ್ಳಿ: ನಾನು ಕಾಂಗ್ರೆಸ್ ಸೇರಲ್ಲ, ಬಿಜೆಪಿ ಬಿಡುವುದಿಲ್ಲ. ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ ಎಂದು ಶಾಸಕ ಅರವಿಂದ್ ಬೆಲ್ಲದ ಸ್ಪಷ್ಟನೆ ನೀಡಿದ್ದಾರೆ.
ಕಾಂಗ್ರೆಸ್ ಸೇರ್ಪಡೆ ವದಂತಿ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿರುವ ಶಾಸಕ ಅರವಿಂದ ಬೆಲ್ಲದ ಅವರು, 'ಸುಳ್ಳುನ್ನೇ ಸತ್ಯ ಎಂದು ಬಿಂಬಿಸುವ ಕಾಲವಿದು. ಆದಕಾರಣ ಸ್ಪಷ್ಟನೆ ನೀಡುತ್ತಿದ್ದೇನೆ. ನಾನು ಬಿಜೆಪಿ ಹಾಗೂ ಸಂಘ ಪರಿವಾರದ ನಿಷ್ಠಾವಂತ ಕಾರ್ಯಕರ್ತ. ಸತ್ಯಕ್ಕೆ ದೂರವಾದ, ದುರುದ್ದೇಶ ಪೂರ್ವಕವಾಗಿ ಕಾಂಗ್ರೆಸ್ ಸೇರುವುದಾಗಿ ವರದಿ ಹಬ್ಬಿಸಿದ್ದಾರೆ. ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಹಿಂಜರಿಯುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
PublicNext
20/09/2021 08:25 pm