ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿಧು ಒಬ್ಬ ಡ್ರಾಮಾ ಮಾಸ್ಟರ್: ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುತ್ತೆ ಎಂದ ಅಮರೀಂರ್ ಸಿಂಗ್

ಚಂಡೀಗಢ: ಪಂಜಾಬ್ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಧು ಅವರನ್ನು "ಸೂಪರ್ ಸಿಎಂ" ಎಂದು ಕರೆದಿರುವ ಮಾಜಿ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು, ಸಿಧು ಒಬ್ಬ 'ಡ್ರಾಮಾ ಮಾಸ್ಟರ್'. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ತಲುಪಲು ಹೆಣಗಾಡಲಿದೆ ಎಂದು ಬುಧವಾರ ಹೇಳಿದ್ದಾರೆ.

'ಇಂತಹ ಅಪಾಯಕಾರಿ ವ್ಯಕ್ತಿ(ಸಿಧು)ಯಿಂದ ದೇಶವನ್ನು ರಕ್ಷಿಸಲು ತಾನು ಯಾವುದೇ ತ್ಯಾಗಕ್ಕೂ ಸಿದ್ಧ ಎಂದು ಅಮರಿಂದರ್ ಸಿಂಗ್ ಹೇಳಿದ್ದಾರೆ. 2022ರ ವಿಧಾನಸಭೆ ಚುನಾವಣೆಯಲ್ಲಿ ಸಿಧು ಅವರ ಸೋಲನ್ನು ಖಚಿತಪಡಿಸಿಕೊಳ್ಳಲು ಪಿಪಿಸಿಸಿ ಅಧ್ಯಕ್ಷರ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿ ಮಾಜಿ ಸಿಎಂ ಘೋಷಿಸಿದ್ದಾರೆ.

Edited By : Nagaraj Tulugeri
PublicNext

PublicNext

22/09/2021 10:11 pm

Cinque Terre

55.28 K

Cinque Terre

6

ಸಂಬಂಧಿತ ಸುದ್ದಿ