ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸ ಕೈಗೊಂಡಿದ್ದು, ಇಂದು ವಾಷಿಂಗ್ಟನ್ ಡಿಸಿಯಲ್ಲಿ ತಲುಪಿದ್ದಾರೆ.
ಪ್ರವಾಸದ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿರುವ ಒಂದು ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಫೋಟೋ ಜೊತೆಗೆ ಪ್ರಧಾನಿ ಮೋದಿ, 'ದೀರ್ಘ ಹಾರಾಟ ಎಂದರೆ ಕೆಲವು ದಾಖಲೆ ಪರಿಶೀಲನೆ ಮತ್ತು ಕೆಲವು ವೈಯಕ್ತಿಕ ಜೀವನದ ಕೆಲಸಗಳ ನಿರ್ವಹಣೆಗೆ ಸಿಕ್ಕ ಅವಕಾಶ' ಎಂದು ಬರೆದುಕೊಂಡಿದ್ದಾರೆ.
ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡು ಏಳು ವರ್ಷಗಳ ಕಳೆದರೂ ಒಂದು ದಿನವೂ ರಜೆ ಪಡೆದಿಲ್ಲ. ಈ ಮೂಲಕ ನಿರಂತರವಾಗಿ ಜನ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಈಗ ಅಮೆರಿಕ ಪ್ರಸಾದ ವೇಳೆಯೂ ವಿಮಾನದಲ್ಲಿ ಕೆಲಸ ನಿರ್ವಹಿಸಿದ ಪ್ರಧಾನಿ ಮೋದಿ ಅವರನ್ನು ಅಭಿಮಾನಿಗಳು ಹಾಡಿ ಹೊಗಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅಮೆರಿಕದಲ್ಲಿ ಸೆಪ್ಟೆಂಬರ್ 22ರಿಂದ 25ರ ವರೆಗೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬೈಡನ್, ಉಪಾಧ್ಯಕ್ಷೆ ಕಮಲಾ ಹ್ಯಾರೀಸ್ ಭೇಟಿಯಾಗಲಿದ್ದಾರೆ.
PublicNext
23/09/2021 11:09 am