ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸದನದಲ್ಲಿ ಯಡಿಯೂರಪ್ಪ ಪರ ಯತ್ನಾಳ್ ಬ್ಯಾಟಿಂಗ್, ಕೈಗೆ ಟಾಂಗ್

ಬೆಂಗಳೂರು: ಅಚ್ಚರಿಯ ಬೆಳವಣಿಗೆ ಎಂಬಂತೆ ಇಂದು ಸದನದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಿಎಂ ಯಡಿಯೂರಪ್ಪರನ್ನು ಸಮರ್ಥಿಸಿಕೊಂಡಿದ್ದಾರೆ. ಹಾಗೂ ಈ ಮೂಲಕ ಕಾಂಗ್ರೆಸ್ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ.

ವಿಧಾನಸಭೆಯಲ್ಲಿ ನಿಯಮ 69ರಡಿ ಕಲ್ಯಾಣ ಕರ್ನಾಟಕ ಭಾಗದ ಕುರಿತು ಗುರುವಾರ ಮುಂದುವರಿದ ಚರ್ಚೆ ನಡೆಯುತ್ತಿತ್ತು. ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಅಭಿವೃದ್ಧಿಗೆ ಸಮರ್ಪಕ ಅನುದಾನ ಒದಗಿಸುವಲ್ಲಿ ರಾಜ್ಯ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ಶಾಸಕರು ಮುಗಿಬಿದ್ದಿದ್ದರು. ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಬಸನಗೌಡ ಪಾಟೀಲ ಯತ್ನಾಳ, "ಕಲ್ಯಾಣ ಕರ್ನಾಟಕ ಅಭಿವೃದ್ಧಿಯಾಗಿಲ್ಲ ಎಂದು ಕಾಂಗ್ರೆಸ್ ಸದಸ್ಯರು ಹೇಳುತ್ತಿದ್ದಾರೆ. ಆದರೆ, ಕಳೆದ 50 ವರ್ಷಗಳ ಕಾಲ ಮಲ್ಲಿಕಾರ್ಜುನ ಖರ್ಗೆ, ಧರ್ಮಸಿಂಗ್ ಅಧಿಕಾರದಲ್ಲಿ ಇದ್ದರು. ಇವರ ಆಳ್ವಿಕೆಯಲ್ಲಿ ಯಾಕೆ ಅಭಿವೃದ್ಧಿ ಕಾರ್ಯಗಳು ನಡೆಯಲಿಲ್ಲ ಎಂದು ಟಾಂಗ್ ನೀಡಿದರು. ಮುಂದುವರಿದು, ಕೇವಲ ಮೂರು ವರ್ಷದ ಹಿಂದೆ ಅಧಿಕಾರಕ್ಕೆ ಬಂದ ಸರ್ಕಾರವನ್ನು ಪ್ರಶ್ನೆ ಮಾಡುತ್ತಿದ್ದೀರಿ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಸಾವಿರಾರು ಕೋಟಿ ರೂಪಾಯಿ ನೀಡಿದ್ದಾರೆ. ಅವರನ್ನು ಟೀಕಿಸುವುದು ಸರಿಯಲ್ಲ' ಎಂದು ಸಮರ್ಥಿಸಿಕೊಂಡರು.

Edited By : Nagaraj Tulugeri
PublicNext

PublicNext

23/09/2021 09:06 pm

Cinque Terre

134.78 K

Cinque Terre

6