ಬೆಂಗಳೂರು : ಒಂದೇ ಟಾಂಗದಲ್ಲಿ ಸಿದ್ದು,ಡಿಕೆಶಿ ಸವಾರಿ ಮಾಡುವ ಮೂಲಕ ಸರ್ಕಾರಕ್ಕೆ ಟಾಂಗಾ ಕೊಟ್ಟಿದ್ದಾರೆ. ದಿನದಿಂದ ದಿನಕ್ಕೆ ತೈಲ ಬೆಲೆ ಮತ್ತು ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ರೀತಿ ವಿಭಿನ್ನವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ.
ಪ್ರತಿಭಟನೆ ಉದ್ದಕ್ಕೂ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಎಮ್ಮೆ ಚರ್ಮದ ಸರ್ಕಾರಕ್ಕೆ ಜನರ ಭಾವನೆ ಅರ್ಥವಾಗುತ್ತಿಲ್ಲ. ಬೆಲೆ ಏರಿಕೆಯಿಂದ ದೇಶದ ಜನ ನರಳುತ್ತಿದ್ದಾರೆ ಎಂದು ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ.
ಇನ್ನು ಎತ್ತಿನ ಗಾಡಿ, ಸೈಕಲ್ ಬಳಿಕ ಇದೀಗ ಟಾಂಗಾ ಮೂಲಕ ಕಾಂಗ್ರೆಸ್ ನಾಯಕರು ವಿಧಾನಸೌಧದತ್ತ ಜಾಥಾ ಹೊರಟು ವಿಧಾನಸೌಧ ತಲುಪಿದ್ದಾರೆ. ರಾಜ್ಯಸರ್ಕಾರಗಳು ಜನರ ರಕ್ತ ಹೀರುತ್ತಿದೆ, ಸಾಮಾನ್ಯ ಮತ್ತು ಬಡ ವರ್ಗಗಳ ಜನರಿಗೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜೀವನ ನಡೆಸಲು ಕಷ್ಟವಾಗುತ್ತಿದೆ, ಹಲವು ಕಡೆಗಳಲ್ಲಿ ಜನರು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗುತ್ತಿದ್ದಾರೆ ಎಂದು ಆರೋಪಿಸಿ ಸರ್ಕಾರದ ಗಮನ ಸೆಳೆಯಲು ಟಾಂಗಾ ಮೂಲಕ ಪ್ರತಿಭಟನಾ ಜಾಥ ಹೊರಟಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಿಂದ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಒಂದೇ ಟಾಂಗಾದಲ್ಲಿ ಸವಾರಿ ಮಾಡಿದ್ದಾರೆ.
PublicNext
24/09/2021 11:12 am