ಹುಬ್ಬಳ್ಳಿ- ಕೋವಿಡ್ ಕಾರಣದಿಂದಾಗಿ ಒಂದೂವರೆ ವರ್ಷದಿಂದ ಕೆಲಸ ಕಾರ್ಯಗಳೆಲ್ಲವೂ ಸ್ಥಗಿತವಾಗಿದ್ದವು. ಈಗಷ್ಟೇ ಪುನರಾರಂಭವಾಗಿ ಚೇತರಿಕೆ ಕಾಣುತ್ತಿದೆ. ಇಂತಹ ಸಂದರ್ಭದಲ್ಲಿ ಪ್ರತಿಭಟನೆಗೆ ಕರೆ ನೀಡಿರುವುದು ಸೂಕ್ತವಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಮೀಸಲಾತಿ ವಿಚಾರವಾಗಿ ಈಗಾಗಲೇ ನಾನು ಅಧಿವೇಶನದಲ್ಲಿ ಶಾಸಕ ಬಸನಗೌಡ ಯತ್ನಾಳ ಇದ್ದಾಗಲೇ ಉತ್ತರ ನೀಡಿದ್ದೇನೆ. ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದರು.
ಪ್ರಧಾನ ಮಂತ್ರಿಗಳು ದೂರದೃಷ್ಟಿ ಇಟ್ಟುಕೊಂಡು ನೂತನ ಶಿಕ್ಷಣ ನೀತಿ ಜಾರಿಗೆ ತಂದಿದ್ದಾರೆ. ಇದು ಅತ್ಯಂತ ಚರ್ಚಿತ ವಿಷಯವಾಗಿದೆ. ಈ ಹಿನ್ನೆಲೆಯಲ್ಲಿ ಟೀಚರ್ಸ್, ಶ್ರೇಷ್ಠ ತಜ್ಞರ ಜೊತೆಗೆ ಚರ್ಚೆ ಮಾಡಿ ಮುಂದಿನ ಪೀಳಿಗೆಗೆ ಯಾವ ರೀತಿ ಶಿಕ್ಷಣ ಇರಬೇಕು ಎನ್ನುವುದು ದಿಟ್ಟ ಪ್ರಯತ್ನವಾಗಿದೆ. ಬದಲಾವಣೆ ಬಂದಾಗ ಹೀಗೆಲ್ಲಾ ವಿರೋಧ ವ್ಯಕ್ತವಾಗುವುದು ಸಹಜ. ಭಾರತೀಯರಿಗಾಗಿ, ಭಾರತೀಯರಿಗೊಸ್ಕರ ಈ ಯೋಜನೆ ಜಾರಿಗೆ ತಂದಿದ್ದೇವೆ ಎಂದರು.
PublicNext
25/09/2021 05:42 pm