ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಂಸದ ಕಾರ್ತಿ ಚಿದಂಬರಂ ಎದುರೇ 'ಕೈ' ಕಾರ್ಯಕರ್ತರ ಮಧ್ಯೆ ಹೊಡೆದಾಟ

ಚೆನ್ನೈ: ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಅವರ ಮಗ ಕಾರ್ತಿ ಚಿದಂಬರಂ ಎದುರೇ ಕಾಂಗ್ರೆಸ್‌ ಕಾರ್ಯಕರ್ತರು ಸಭೆಯೊಂದರಲ್ಲಿ ಪರಸ್ಪರ ಹೊಡೆದಾಡಿಕೊಂಡಿರುವ ತಮಿಳುವಾಡಿನಲ್ಲಿ ಘಟನೆ ನಡೆದಿದೆ.

ತಮಿಳುನಾಡಿನ ವಿವಿಧ ಜಿಲ್ಲೆಗಳಲ್ಲಿ ಸ್ಥಳೀಯ ಚುನಾವಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಶಿವಗಂಗಾ ಜಿಲ್ಲೆಯ ಸ್ಥಳೀಯ ಚುನಾವಣೆ ತಯಾರಿಗಾಗಿ ಕಾಂಗ್ರೆಸ್​ ಕಾರ್ಯಕರ್ತರ ಸಭೆ ಆಯೋಜನೆ ಮಾಡಿತ್ತು. ಇದರಲ್ಲಿ ಸಂಸದ ಕಾರ್ತಿ ಚಿದಂಬರಂ ಸಹ ಭಾಗಿಯಾಗಿದ್ದರು. ಸಭೆ ನಡೆಯುತ್ತಿದ್ದಾಗ ಎರಡು ಗುಂಪುಗಳ ಮಧ್ಯೆ ಮಾತಿಗೆ ಮಾತು ಬೆಳೆದು ಪರಸ್ಪರ ಕುರ್ಚಿ ಎತ್ತಿ ಹೊಡೆದಾಡಿಕೊಂಡಿದ್ದಾರೆ.

ಈ ವೇಳೆ ಘಟನಾ ಸ್ಥಳಕ್ಕಾಗಮಿಸಿರುವ ಪೊಲೀಸರು ಕಾರ್ಯಕರ್ತರನ್ನು ಹೊರಗೆ ಕಳುಹಿಸಿ, ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಕಾಂಗ್ರೆಸ್​ ಪಕ್ಷದ ಎರಡು ಗುಂಪಿನ ಕಾರ್ಯಕರ್ತರು ಹೊಡೆದಾಡಿಕೊಂಡಿರುವ ವಿಡಿಯೋ ಮಾತ್ರ ಸಿಕ್ಕಾಪಟ್ಟೆ ವೈರಲ್​​ ಆಗುತ್ತಿದೆ.

Edited By : Vijay Kumar
PublicNext

PublicNext

25/09/2021 08:12 pm

Cinque Terre

99.5 K

Cinque Terre

4

ಸಂಬಂಧಿತ ಸುದ್ದಿ