ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತಾಲಿಬಾನಿ ಬಿಜೆಪಿ ಸರ್ಕಾರದಿಂದ ದೇಶವನ್ನು ಮುನ್ನಡೆಸಲು ಸಾಧ್ಯವಿಲ್ಲ: ದೀದಿ ಕಿಡಿ

ಕೋಲ್ಕತ್ತಾ: ಬಿಜೆಪಿ ಸರ್ಕಾರ ತಾಲಿಬಾನಿ ಸರ್ಕಾರ. ತಾಲಿಬಾನಿ ಬಿಜೆಪಿ ಸರ್ಕಾರದಿಂದ ದೇಶವನ್ನು ಮುನ್ನಡೆಸಲು ಸಾಧ್ಯವಿಲ್ಲ ಎಂದು ಪಶ್ಟಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.

ಪಶ್ಚಿಮ ಬಂಗಾಳದ ಭವಾನಿಪುರ ಉಪಚುನಾವಣೆಯ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಇಟಲಿಯಲ್ಲಿ ನಡೆಯಲಿರುವ ವಿಶ್ವ ಶಾಂತಿ ಸಮಾವೇಶದಲ್ಲಿ ಭಾಗವಹಿಸಲು ಏಷ್ಯಾದ ಪ್ರತಿನಿಧಿಯಾಗಿ ನನ್ನನ್ನು ಆಮಂತ್ರಿಸಲಾಗಿದೆ. ಆದರೆ ಕೇಂದ್ರ ಸರ್ಕಾರ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಅನುಮತಿ ನಿರಾಕರಿಸಿದೆ. ಕೇಂದ್ರ ಸರ್ಕಾರ ಅಸೂಯೆಯಿಂದ ಅನುಮತಿ ನಿರಾಕರಿಸಿದೆ. ಉಪಚುನಾಣೆಯಲ್ಲಿ ಭವಾನಿಪುರ ಮತದಾರರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಮನೆ ದಾರಿ ತೋರಿಸುತ್ತಾರೆ. ಮುಂದಿನ ಚುನಾವಣೆಗಳಲ್ಲಿ ದೇಶದ ಉಳಿದ ಭಾಗಗಳಲ್ಲೂ ಇದನ್ನೇ ಅನುಸರಿಸುತ್ತಾರೆ ಎಂದು ವಾಗ್ದಾಳಿ ನಡೆಸಿದರು.

Edited By : Vijay Kumar
PublicNext

PublicNext

26/09/2021 09:48 am

Cinque Terre

50.96 K

Cinque Terre

11

ಸಂಬಂಧಿತ ಸುದ್ದಿ