ಬೆಳಗಾವಿ: ಹಿಂದುಳಿದ ವರ್ಗಗಳ ಆಯೋಗದ ವರದಿ ಬಂದ ಮೇಲೆಯೇ ಮೀಸಲಾತಿ ನಿರ್ಧಾರ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಅ.1ರಂದು ಪ್ರತಿಭಟನೆಗೆ ಜಯಮೃತ್ಯುಂಜಯ ಸ್ವಾಮೀಜಿ ನಿರ್ಧಾರ ಮಾಡಿದ್ದಾರೆ. ನಾನು ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಹಿಂದುಳಿದ ವರ್ಗಗಳ ಆಯೋಗ ವರದಿ ಬಂದ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.
PublicNext
26/09/2021 10:18 am