ಧಾರವಾಡ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ನಾಳೆ ಕರೆ ನೀಡಿರುವ ಭಾರತ್ ಬಂದ್ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರತಿಕ್ರಿಯಿಸಿದ್ದಾರೆ. ಇದೊಂದು ರಾಜಕೀಯ ಹಿತಾಸಕ್ತಿಯಿಂದ ಕೂಡಿದೆ. ಪಟ್ಟಭದ್ರ ಸ್ವಹಿತಾಸಕ್ತಿ ಇದರಲ್ಲಿದೆ ಎಂದು ಹೇಳಿದ್ದಾರೆ.
ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಕಾನೂನುಗಳನ್ನು ನಾವು ಮಾಡುತ್ತೇವೆ ಎಂದು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹೇಳಿತ್ತು. ಅದನ್ನೇ ನಾವು ಮಾಡಿದ್ದೇವೆ. ಇಡೀ ದೇಶದಲ್ಲಿ ಎಲ್ಲಿಯೂ ಸಮಸ್ಯೆಯಾಗಿಲ್ಲ ಎಂದರು.
ಪಂಜಾಬ್‌ದಲ್ಲಿ ಮಾತ್ರ ತಪ್ಪು ತಿಳಿವಳಿಕೆ ಮೂಡಿಸಿದ್ದಾರೆ. ಬಂದ್ ಪರಿಣಾಮ ದೇಶದಲ್ಲಿ ಆಗುವುದಿಲ್ಲ. ಜನ ಸಹ ಇದಕ್ಕೆ ಬೆಂಬಲ ಕೊಡುವುದಿಲ್ಲ ಎಂದು ಹೇಳಿದರು
PublicNext
26/09/2021 09:05 pm