ಧಾರವಾಡ: ಕೃಷಿ ಕಾಯ್ದೆಗಳು ರೈತರ ಪರವಾಗಿವೆ. ರೈತರು ಕೂಡ ಈ ಕಾಯ್ದೆಗಳ ಪರವಾಗಿದ್ದಾರೆ. ಇಡೀ ದೇಶದಲ್ಲಿ ಕಾಯ್ದೆಯ ವಿರುದ್ಧ ಎಲ್ಲೂ ಕೂಡ ಗಲಭೆಗಳನ್ನು ಹಾಗೂ ಪ್ರತಿಭಟನೆಗಳನ್ನು ಮಾಡಿಲ್ಲ. ಹೀಗಾಗಿ ಈ ಭಾರತ ಬಂದ್ ಕರೆ ರಾಜಕೀಯ ಪ್ರೇರಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳೀನ್ ಕುಮಾರ ಕಟೀಲ್ ಹೇಳಿದರು.
ಧಾರವಾಡದಲ್ಲಿ ಮಾತನಾಡಿದ ಅವರು, ರೈತರು ಯಾರೂ ಕೂಡ ಕೃಷಿ ಕಾಯ್ದೆಗಳನ್ನು ವಿರೋಧ ಮಾಡುತ್ತಿಲ್ಲ. ಆದರೆ ರೈತರ ಹೆಸರಿನಲ್ಲಿ ರಾಜಕೀಯ ಉದ್ದೇಶಕ್ಕಾಗಿ ಬಂದ್ ಕರೆ ನೀಡಲಾಗಿದೆ. ರೈತರ ಹೆಸರಿನಲ್ಲಿ ಬೆಳೆ ಬೇಯಿಸಿಕೊಳ್ಳಲು ಕಾಂಗ್ರೆಸ್ ಹೊರಟಿದೆ. 2014 ರ ನಂತರ ನರೇಂದ್ರ ಮೋದಿಯವರು ಪ್ರಧಾನಿ ಆದ ಮೇಲೆ ತೆಗೆದುಕೊಳ್ಳುತ್ತಿರುವ ನಿರ್ಧಾರವನ್ನು ಕಾಂಗ್ರೆಸ್ ವಿರೋಧಿಸುತ್ತಲೇ ಬರುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.
PublicNext
26/09/2021 09:07 pm