ಗದಗ: ಇಂದು ಗದಗ ಜಿಲ್ಲೆಗೆ ಮೊದಲ ಬಾರಿ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿದ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ಮೂಲಕ ಸ್ವಾಗತಿಸಿದರು.
ಹೌದು.. ಕರವೇ ಹಾಗೂ ವಿವಿಧ ಸಂಘಟನೆಗಳಿಂದ ವೇದಿಕೆ ಪಕ್ಕವೇ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಸಿಎಂ ಸಂಘಟನೆಗಳ ಮನವಿ ಸ್ವೀಕರಿಸದ ಹಿನ್ನಲೆ ಸಂಘಟನೆ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದ್ದು, ಜಿಲ್ಲೆ ಅಭಿವೃದ್ಧಿಗೆ ವಿಶೇಷ ಪ್ಯಾಕೆಜ್ ನೀಡುವಂತೆ ಮನವಿ ಸಲ್ಲಿಸಲು ಬಂದಿದ್ದ ಕಾರ್ಯಕರ್ತರು ಅಸಮಾಧಾನ ಹೊರಹಾಕಿದರು.
ಜಿಲ್ಲಾಧಿಕಾರಿ ಸುಂದರೇಶಬಾಬು ಹಾಗೂ ಎಸ್ಪಿ ಯತೀಶ್ ಪ್ರತಿಭಟನಾಕಾರರ ಮನವೊಲಿಕೆಗೆ ಮುಂದಾದರು.
ಸಿಎಂ ಅವರೇ ಮನವಿ ಸ್ವೀಕರಿಸಬೇಕೆಂದು ಹಠ ಹಿಡಿದಿರೋ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಹರಸಾಹಸ ಪಡುವಂತಾಯಿತು.
PublicNext
26/09/2021 09:41 pm