ಹುಬ್ಬಳ್ಳಿ: ಭಾರತ ಬಂದ್ ಮಾಡಿ ಜನರಿಗೆ ತೊಂದರೆ ನೀಡುವ ಕೆಲಸ ಮಾಡಬಾರದು. ಜನರು ಈಗಷ್ಟೆ ಕೊರೋನಾ ಹೊಡೆತದಿಂದ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿಂದು ಕೆಎಲ್ಇ ಕಾಲೇಜಿನ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು,ಭಾರತ ಬಂದ್ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡಬೇಡಿ ನಿಮ್ಮ ವೈಚಾರಿಕತೆಯ ಹಿನ್ನೆಲೆಯಲ್ಲಿ ಹೋರಾಟ ಮಾಡಿ ಎಂದು ಸಲಹೆ ನೀಡಿದರು.
ಕಾಂಗ್ರೆಸ್ ಪಕ್ಷದ ನಾಯಕರ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಗುಲಾಮಗಿರಿ ಪಾರ್ಟಿಯಾಗಿದೆ. ಅಲ್ಲದೇ ಬಿಜೆಪಿ ಆಡಳಿತ ನೋಡಿ ಮಾಜಿ ಸಿಎಂ ಸಿದ್ಧರಾಮಯ್ಯನವರು ಹತಾಶರಾಗಿದ್ದಾರೆ. ಅವರು ಈ ಹಿಂದೆ ನಿಭಾಯಿಸಿದ ಸ್ಥಾನಕ್ಕೂ ಈಗ ನಡೆದುಕೊಳ್ಳದ್ದಕ್ಕೂ ತಕ್ಕದಲ್ಲ ಎಂದು ಮಾಜಿ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು.
ಇನ್ನೂ ಭಾರತ ಬಂದ್ ಗೆ ಕಾಂಗ್ರೆಸ್ ಬೆಂಬಲ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನಾನು ಅಧಿವೇಶನದಲ್ಲಿಯೂ ಹೇಳಿದ್ದೇನೆ. ಈಗಲೂ ಹೇಳುತ್ತಿದ್ದೇನೆ. ಕಾಂಗ್ರೆಸ್ ವಿಪಕ್ಷವಾಗಿ ಭಾರತ ಬಂದ್ ಗೆ ಬೆಂಬಲ ನೀಡುತ್ತಿದೆ ಎಂದು ಅವರು ಹೇಳಿದರು.
PublicNext
27/09/2021 10:19 am